ಬೆಳಗಾವಿ :
ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಿರುವ ಬಜೆಟ್ ಇದು ನಿರಾಶಾದಾಯಕವಾಗಿದೆ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಸ್ತುತ ಬಜೆಟ್ ಜನಸಾಮಾನ್ಯರನ್ನು ಕೇಂದ್ರವಾಗಿಟ್ಟುಕೊಂಡು ರೂಪಿತಗೊಂಡಿಲ್ಲ. ಶಿಕ್ಷಣ ಆರೋಗ್ಯ, ಕೃಷಿ, ನೀರಾವರಿ ಕ್ಷೇತ್ರಗಳಿಗೆ ಕೊಡಬೇಕಾದ ಪ್ರಾಮುಖ್ಯತೆಯನ್ನು, ಆದ್ಯತೆಯನ್ನು ಕಡೆಗಣಿಸಲಾಗಿದೆ. ಅಡುಗೆ ಅನಿಲ ದರವನ್ನು ಏರಿಸುವುದರ ಮೂಲಕವಾಗಿ ಬಡವರ ಹೊಟ್ಟೆಯ ಮೇಲೆ ಬರೆ ಎಳೆದಿದೆ. ಗ್ಯಾರಂಟಿಗಳ ಭರಾಟೆಯಲ್ಲಿ ಜನಸಾಮಾನ್ಯರ ಹಿತಾಸಕ್ತಿಗಳನ್ನು ಕಾಪಾಡಿಲ್ಲವೆಂದು ಹೇಳಿದ್ದಾರೆ.