ಬೆಳಗಾವಿ :
ಪ್ರಸಕ್ತ ಸಾಲಿನ ಬೆಳಗಾವಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೆ. 25,26 ರಂದು ಹಮ್ಮಿಕೊಳ್ಳಲಾಗಿದೆ.
ಸೆ.25 ರಂದು ಅಥ್ಲೆಟಿಕ್ಸ್, ವಾಲಿಬಾಲ್, ಕಬಡ್ಡಿ, ಬಾಸ್ಕೇಟಬಾಲ್, ಕುಸ್ತಿ, ಶಟಲ್ ಬ್ಯಾಡ್ಮಿಂಟನ್, ಹಾಕಿ, ಈಜು (ಆಯ್ಕೆ), ನೆಟ್ಬಾಲ್ (ಆಯ್ಕೆ) ಹಾಗೂ ಸೆ. 26 ರಂದು ಖೋಖೋ, ಫುಟಬಾಲ್, ಬಾಲ್ ಬ್ಯಾಡ್ಮಿಂಟನ್, ಥ್ರೋಬಾಲ್, ಹ್ಯಾಂಡ್ಬಾಲ್, ಟೆನ್ನಿಸ್ (ಆಯ್ಕೆ), ಯೋಗ, ಟೇಬಲ್ ಟೆನ್ನಿಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.
ಬಾಸ್ಕೇಟ್ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ನಡೆಸಲಾಗುತ್ತಿದ್ದು, ತಂಡಗಳು ಜಿಲ್ಲಾ ಮಟ್ಟಕ್ಕೆ ನೇರವಾಗಿ ಭಾಗವಹಿಸಬಹುದಾಗಿದೆ. ಲಾನ್ಟೆನ್ನಿಸ್, ನೆಟ್ಬಾಲ್ ಹಾಗೂ ಈಜು ಕ್ರೀಡೆಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆಗಳನ್ನು ನಡೆಸಲಾಗುವುದು, ಭಾಗವಹಿಸುವ ಪುರುಷ ಮತ್ತು ಮಹಿಳೆಯರು ನೇರವಾಗಿ ಭಾಗವಹಿಸಬಹುದಾಗಿದೆ.
ನಿಯಮಗಳು
ತಾಲೂಕಾ ಮಟ್ಟದಲ್ಲಿ ವೈಯಕ್ತಿಕ ಸ್ಪರ್ಧೆಗಳಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದವರು ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದವರು ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ, ಕ್ರೀಡಾಕೂಟದಲ್ಲಿ ರಕ್ಷಣಾ ಪಡೆ, ಅರೆರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳು ಭಾಗವಹಿಸಲು ಅರ್ಹರಲ್ಲ, ಬಾಸ್ಕೇಟ್ಬಾಲ್, ಕುಸ್ತಿ, ಬ್ಯಾಡ್ಮಿಂಟನ್, ಹಾಕಿ, ಹ್ಯಾಂಡಬಾಲ್, ಟೇಬಲ್ ಟೆನ್ನಿಸ್, ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗಳನ್ನು ನೇರವಾಗಿ ಜಿಲ್ಲಾ ಮಟ್ಟದಲ್ಲಿ ಸಂಘಟಿಸಲಾಗುವುದು, ಲಾನ್ಟೆನ್ನಿಸ್, ನೆಟ್ಬಾಲ್ ಹಾಗೂ ಈಜು ಕ್ರೀಡೆಗಳಿಗೆ ಜಿಲ್ಲಾ ಮಟ್ಟದಲ್ಲಿ ಆಯ್ಕೆಗಳನ್ನು ನಡೆಸಲಾಗುವುದು, ನಿರ್ಣಾಯಕರ ನಿರ್ಣಯವೇ ಅಂತಿಮವಾಗಿರುತ್ತದೆ, ಕ್ರೀಡಾಕೂಟದಲ್ಲಿ ಅಸಭ್ಯವಾಗಿ ವರ್ತಿಸಿದ ಕ್ರೀಡಾಪಟು ಅಥವಾ ತಂಡಗಳನ್ನು ಅನರ್ಹಗೊಳಿಸಲಾಗುವುದು, ಭಾಗವಹಿಸುವ ಕ್ರೀಡಾಪಟುಗಳು ತಮ್ಮ ಬ್ಯಾಂಕ್ ಪಾಸ್ಬುಕ್ ಪ್ರತಿ ಮತ್ತು ಆಧಾರ್ ಕಾರ್ಡ್ ಪ್ರತಿಯನ್ನು ಕಡ್ಡಾಯವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ ೦೮೩೧-೨೯೫೦೩೦೬ ಗೆ ಸಂಪರ್ಕಿಸಬಹುದು ಎಂದು ಬೆಳಗಾವಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.