This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

Local News

ಬೆಳಗಾವಿ ಜಿ.ಎ.ಪ.ಪೂ ಕಾಲೇಜಿನಲ್ಲಿ ಪ್ರೌಢಶಾಲಾ ವಿಭಾಗದ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ District Level Educational and Children's Vocational Education Workshop at G.A. College Belagavi


 

ಬೆಳಗಾವಿ :
ವಿದ್ಯಾರ್ಥಿಗಳು ತಮ್ಮಲ್ಲಿರುವ ಸಹನಶೀಲತೆ ಮತ್ತು ಕೌಶಲ್ಯಗಳನ್ನು ಬೆಳೆಸಿಕೊಂಡು ಸಾಮಾಜಿಕ ಉತ್ಪಾದನಾ ಕಾರ್ಯದಲ್ಲಿ ಸಶಕ್ತ ಗೊಳ್ಳಬೇಕು ಎಂದು ಬೆಳಗಾವಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಸವರಾಜ್ ನಾಲತವಾಡ ಹೇಳಿದರು.

ಅವರು ಇಂದು ನಗರದ ಕೆಎಲ್ಇ ಜಿ.ಎ.ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಶೈಕ್ಷಣಿಕ ಹಾಗೂ ಮಕ್ಕಳ ವೃತ್ತಿ ಶಿಕ್ಷಣ ಕಲಿಕೋತ್ಸವ ಮತ್ತು ಪಠ್ಯಧಾರಿತ ವಸ್ತು ಪ್ರದರ್ಶನದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಪ್ರತಿ ಪ್ರತಿಯೊಬ್ಬರ ವೈಯಕ್ತಿಕ ಬೆಳವಣಿಗೆ ಹಂತದಲ್ಲಿ ಕಲಿಕೋತ್ಸವ ಚಟುವಟಿಕೆಗಳು ಪ್ರಮುಖ ಪಾತ್ರವಹಿಸುತ್ತವೆ ಎಂದರು.

ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳು, ನಗರ ಹಾಗೂ ಗ್ರಾಮೀಣ ವಿದ್ಯಾರ್ಥಿಗಳು ಪಾಲ್ಗೊಂಡು ತಮ್ಮ ಕೌಶಲವನ್ನು ಪ್ರದರ್ಶಿಸಿದರು.

ಅಧ್ಯಕ್ಷತೆಯನ್ನು ಉಪ ಪ್ರಾಚಾರ್ಯ ಸಿದ್ದರಾಮ ಗದಗ ವಹಿಸಿದ್ದರು. ವಿಷಯ ಪರಿವೀಕ್ಷಕರಾದ ಬಿ.ವೈ. ಭಜಂತ್ರಿ, ಜಿ .ಎಸ್ ಕಂಬಳಿ ಹಾಜರಿದ್ದರು.


Jana Jeevala
the authorJana Jeevala

Leave a Reply