ಬೆಳಗಾವಿ : ಪಂಚಮಸಾಲಿ ಸಮಾಜದ ಬೆಳಗಾವಿ ಜಿಲ್ಲಾ ಅಧ್ಯಕ್ಷ ಆರ್.ಕೆ.ಪಾಟೀಲ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು.
ಚಿಕ್ಕೋಡಿ ತಾಲೂಕಿನ ಡೋಣವಾಡದವರಾಗಿದ್ದ ಆರ್.ಕೆ. ಪಾಟೀಲ ವೃತ್ತಿಯಲ್ಲಿ ವಕೀಲರಾಗಿದ್ದರು. ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟಗಳಲ್ಲಿ ಸಕ್ರೀಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದರು. ಅಲ್ಪ ಕಾಲದ ಅನಾರೋಗ್ಯದ ನಂತರ ಅವರು ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಬೆಳಗ್ಗೆ ನಿಧನರಾದರು. ಅವರಿಗೆ ಪತ್ನಿ, ಪುತ್ರ, ಪುತ್ರಿ ಇದ್ದಾರೆ. ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ಡೋಣವಾಡದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.