ಬೆಳಗಾವಿ: ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಬೆಳಗಾವಿ ಜಿಲ್ಲೆಯ 5 ಲಕ್ಷ 29 ಸಾವಿರ ರೈತರ ಬ್ಯಾಂಕ್ ಖಾತೆಗಳಿಗೆ 105.86 ಕೋಟಿ ರೂ. ಡಿಬಿಟಿ ಮೂಲಕ ರೈತರ ಖಾತೆಗೆ ವರ್ಗಾಯಿಸಿದ್ದಾರೆ ಇದು ಅನ್ನದಾತರ ಕಲ್ಯಾಣವೇ ಮೋದಿ ಸರ್ಕಾರದ ಆದ್ಯತೆಯಾಗಿದೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನು ಶ್ಲಾಘಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ಬಿಹಾರ ರಾಜ್ಯದ ಭಾಗಲಪುರದಲ್ಲಿ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ 19ನೇ ಕಂತಿನ ಭಾಗವಾಗಿ ದೇಶದ 9.8 ಕೋಟಿಗೂ ಅಧಿಕ ರೈತರಿಗೆ 22,000 ಕೋಟಿ ರೂ ಸೇರಿದಂತೆ ರಾಜ್ಯದ 44.20 ಲಕ್ಷ ರೈತರ ಖಾತೆಗೆ 884.02 ಕೋಟಿ ರೂಪಾಯಿ ನೇರವಾಗಿ ಫಲಾನುಭವಿ ರೈತರ ಖಾತೆಗಳಿಗೆ ಬಿಡುಗಡೆ ಮಾಡಿದ್ದಾರೆ. ಇದು ವಿಶ್ವದ ಅತಿದೊಡ್ಡ ಡಿಬಿಟಿ ಯೋಜನೆಗಳಲ್ಲಿ ಒಂದಾಗಿದೆ ಎಂದರು.
ಕಳೆದ 10 ವರ್ಷಗಳಲ್ಲಿ ಕೇಂದ್ರ ಸರ್ಕಾರ ಕೃಷಿ ಬಜೆಟ್ 5 ಪಟ್ಟು ಹೆಚ್ಚಳವಾಗಿದೆ. ಬಜೆಟ್ನಲ್ಲಿ ರೈತರಿಗೆ ಮತ್ತಷ್ಟು ಸಾಲವನ್ನು ನೀಡುವ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ನ ಮಿತಿಯನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಕೆ ಮಾಡಲಾಗಿದೆ. ರೈತರ ಅನುಕೂಲಕ್ಕಾಗಿ ವಾರ್ಷಿಕ 12.7 ಲಕ್ಷ ಮೆಟ್ರಿಕ್ ಟನ್ ಸಾಮರ್ಥ್ಯದ 3 ಯೂರಿಯಾ ಪ್ಲಾಂಟ್ ನಿರ್ಮಾಣ. ಗುಣಮಟ್ಟದ ಹತ್ತಿಗಾಗಿ ಹೆಚ್ಚುವರಿ ಉದ್ದವಾದ ಪ್ರಧಾನ ಹತ್ತಿ ಪ್ರಭೇದಗಳಿಗೆ ಸಹಾಯ ಮಾಡಲು ಐದು ವರ್ಷಗಳ ಕಾಲ ಹತ್ತಿ ಉತ್ಪಾದಕತೆಗಾಗಿ ಮಿಷನ್ ಘೋಷಣೆ. ಮಾಡಲಾಗಿದೆ.
ಮೋದಿ ಸರ್ಕಾರ ರೈತರು ಸಬಲರಾಗಬೇಕು ಮತ್ತು ಸಮೃದ್ಧರಾಗಬೇಕು ಎನ್ನುವ ಕಳಕಳಿಯನ್ನು ಹೊಂದಿದ್ದು, ನೂರಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಎಂದರಲ್ಲದೆ ದೇಶದ ಬೆನ್ನೆಲುಬಾಗಿರುವ ರೈತರ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಸದಾ ಕಾಲ ಇರಲಿದೆ ಎಂದು ಸಂಸದ ಈರಣ್ಣ ಕಡಾಡಿ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.