ಬೆಳಗಾವಿ/ಬೆಂಗಳೂರು :
ನನ್ನ ಗೃಹ ಕಚೇರಿಯಲ್ಲಿಂದು ಕುಡಚಿ ಶಾಸಕರಾದ ಮಹೇಂದ್ರ ತಮ್ಮಣ್ಣವರ್ ಅವರ ಮಗನಿಗೆ “ಶಿವಕುಮಾರ್” ಎಂದು ನಾಮಕರಣ ಮಾಡುವ ಭಾಗ್ಯ ನನ್ನದಾಯಿತು. ನನ್ನ ಹೆಸರನ್ನು ಮಗುವಿಗೆ ಇಡಲು ನಿರ್ಧರಿಸಿದ ಶಾಸಕರ ಈ ನಡೆಗೆ ನಾನು ಧನ್ಯ!
ಮುಂದಿನ ದಿನಗಳಲ್ಲಿ ಈ ಮುದ್ದಾದ ಮಗು ನನಗಿಂತಲೂ ಎತ್ತರಕ್ಕೆ ಬೆಳೆಯಲಿ, ತಂದೆ-ತಾಯಿಗಳಿಗೆ ಒಳ್ಳೆಯ ಹೆಸರು ತರುವಂತಾಗಲಿ ಎಂದು ಶುಭಹಾರೈಸಿದೆ.
ಕನ್ನಡ ರಾಜ್ಯೋತ್ಸವದ ಶುಭ ಸಂದರ್ಭದಲ್ಲಿ, ಈ “ಶಿವಕುಮಾರ” ಕರುನಾಡ ಬೆಳಗುವ ಕುವರನಾಗಲಿ ಎಂದು ಮನತುಂಬಿ ಹಾರೈಸುವೆ.
ಇದು ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ಹಾಗೂ ಅವರ ಮಗುವಿನ ಜೊತೆಗೆ ಇರುವ ಫೋಟೋ ಹಂಚಿಕೊಂಡು ಬರೆದಿರುವ ಬರಹ.

 
             
         
         
        
 
  
        
 
    