ಬೆಳಗಾವಿ :
2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ” ಪ್ರಶಸ್ತಿ ಮತ್ತು ವಿಶೇಷ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾದ ಗ್ರಾಮ ಪಂಚಾಯತಿಗಳ ಮಾಹಿತಿ ಇಂತಿದೆ.
ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು(ಪಂ.ರಾಜ್) ರವರ ಅಧ್ಯಕ್ಷತೆಯಲ್ಲಿ ದಿನಾಂಕ:25.09.2023 ರಂದು ನಡೆದ 2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯತಿಗಳ ಆಯ್ಕೆಯನ್ನು ಅಂತಿಮಗೊಳಿಸುವ ಕುರಿತು ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
2022-23 ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಜಿಲ್ಲಾ ಮಟ್ಟದ ಗಾಂಧಿ ಗ್ರಾಮ ಪುರಸ್ಕಾರ ಆಯ್ಕೆ ಸಮಿತಿಯಲ್ಲಿ ಆಯ್ಕೆ ಮಾಡಿ ದೃಢೀಕರಿಸಿ, ಪಟ್ಟಿಯನ್ನು ದಿನಾಂಕ:25.09.2023 ರಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು(ಪಂ.ರಾಜ್) ರವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಮಟ್ಟದ ಪರಾಮರ್ಶೆ ಸಮಿತಿ ಸಭೆಯಲ್ಲಿ ಮಂಡಿಸಿ, ಆಯ್ಕೆಯನ್ನು ಅಂತಿಮಗೊಳಿಸಲಾಗಿರುತ್ತದೆ.
ಅದರಂತೆ, 2022-23ನೇ ಸಾಲಿನ “ಗಾಂಧಿ ಗ್ರಾಮ ಪುರಸ್ಕಾರ” ಪ್ರಶಸ್ತಿಗೆ ಆಯ್ಕೆಯಾದ ಗ್ರಾಮ ಪಂಚಾಯತಿಗಳಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ದಿನಾಂಕ:02.10.2023ರಂದು ಬೆಳಿಗ್ಗೆ 10.00 ಗಂಟೆಗೆ ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಆಯೋಜಿಸಲಾಗಿದ್ದು, ಕಾರ್ಯಕ್ರಮದಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಸೇರಿದಂತೆ ಭಾಗವಹಿಸಿ, ಪ್ರಶಸ್ತಿ ಸ್ವೀಕರಿಸಲು ಕೋರಲಾಗಿದೆ.
ತಾಲೂಕು-ಗ್ರಾಮ :
ಅಥಣಿ- ಐಗಳಿ, ಬೈಲಹೊಂಗಲ- ಉಡಿಕೇರಿ, ಬೆಳಗಾವಿ-ಬಸ್ತವಾಡ, ಚಿಕ್ಕೋಡಿ- ಅಂಕಲಿ, ಗೋಕಾಕ- ಮಕ್ಕಳಗೇರಿ, ಹುಕ್ಕೇರಿ-ಕುರಣಿ, ಮೂಡಲಗಿ- ರಾಜಾಪುರ, ನಿಪ್ಪಾಣಿ-ಸಿದ್ನಾಳ, ರಾಮದುರ್ಗ- ಸುರೇಬಾನ, ರಾಯಬಾಗ-ಜಲಾಲಪುರ, ಸವದತ್ತಿ-ಸಿಂಧೋಗಿ.