ಖಾನಾಪುರ: ನವೆಂಬರ್ ಒಂದರ ಕರ್ನಾಟಕ ರಾಜ್ಯೋತ್ಸವದಂದು ಎಂಇಎಸ್ ಗೆ ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿ ಕಿತ್ತೂರು ಕರ್ನಾಟಕ ಸೇನೆ ತಹಶೀಲ್ದಾರ್ ಗೆ ಮನವಿ ಸಲ್ಲಿಸಿದೆ.
ಸೇನೆಯ ಅಧ್ಯಕ್ಷ ವಸಂತ ನಾಯಕ ಅವರ ನೇತೃತ್ವದಲ್ಲಿ ಮನವಿ ಸಲ್ಲಿಸಿರುವ ಸದಸ್ಯರು, ಶಾಂತಿ, ಸೌಹಾರ್ದತೆ ಮತ್ತು ಸಾರ್ವಜನಿಕ ಸುರಕ್ಷತೆ ಕಾಪಾಡುವ ಉದ್ದೇಶದಿಂದ ಆಡಳಿತ ಗಮನಹರಿಸುವಂತೆ ಮನವಿ ಮಾಡಿದರು. ಸಿದ್ದು ಪಾಟೀಲ ಮತ್ತು ಇತರರು ಉಪಸ್ಥಿತರಿದ್ದರು.

 
             
         
         
        
 
  
        
 
    