This is the title of the web page
This is the title of the web page

Live Stream

December 2022
T F S S M T W
1234567
891011121314
15161718192021
22232425262728
293031  

| Latest Version 8.0.1 |

Local News

ರವಿವಾರ ಬೆಳಗಾವಿಗೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ Public Library Department Director Dr. Belgaum on Sunday Satish Kumar Hosmani


 

 

ಬೆಳಗಾವಿ :
ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ್ ಕುಮಾರ್ ಹೊಸಮನಿ ಅವರು ರವಿವಾರ ದಿನಾಂಕ 23.10.22 ರಂದು ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಜಿಲ್ಲಾ ಕೇಂದ್ರ ಗ್ರಂಥಾಲಯ ಬೆಳಗಾವಿ, ಕಿತ್ತೂರು ಶಾಖಾ ಗ್ರಂಥಾಲಯದ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ, ಅಡಿಗಲ್ಲು ಸಮಾರಂಭ ನಡೆಯಲಿದ್ದು, ಮತ್ತು ಕಿತ್ತೂರಿನಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ನೆರವೇರಲಿದ್ದು, ಸಮಾರಂಭದ ದಿವ್ಯ ಸಾನಿಧ್ಯವನ್ನು ಚನ್ನಮ್ಮ ಕಿತ್ತೂರಿನ ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ, ನಿಚ್ಚನಿಕೆಯ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ ಅವರು ವಹಿಸಿಕೊಳ್ಳ ಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ, ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರು , ಶಿಕ್ಷಣ ಸಚಿವ ಬಿ.ಸಿ. ನಾಗೇಶ, ಕಿತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಮಹಾಂತೇಶ ದೊಡ್ಡಗೌಡರ್, ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು ಮತ್ತು ಜಿಲ್ಲೆಯ ಮಂತ್ರಿಗಳು, ಶಾಸಕರು,
ಸಾರ್ವಜನಿಕ ಗ್ರಂಥಾಲಯ ಇಲಾಖೆ ನಿರ್ದೇಶಕ
ಸತೀಶ್ ಕುಮಾರ್ ಹೊಸಮನಿ ಅವರು ಈ ಸಂದರ್ಭದಲ್ಲಿ ಹಾಜರಿರಲಿದ್ದಾರೆ. ಎಲ್ಲ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮತ್ತು ಉಪನಿರ್ದೇಶಕ ರಾಮಯ್ಯ ಭಾಗವಹಿಸುವರು.

ಡಾ. ಸತೀಶ್ ಕುಮಾರ್ ಹೊಸಮನಿ ಅವರು ನಗರದ ಮತ್ತು ಜಿಲ್ಲೆಯ ವಿವಿಧ ಶಾಖಾ,ಸೇವಾ ಕೇಂದ್ರ ಗ್ರಂಥಾಲಯಗಳಿಗೆ ಭೇಟಿ ನೀಡಲಿದ್ದಾರೆ.


Jana Jeevala
the authorJana Jeevala

Leave a Reply