ಬೆಳಗಾವಿ : ಹುಬ್ಬಳ್ಳಿಯ ಬಿವಿಬಿ ಕಾಲೇಜಿನ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಬರ್ಬರ ಹತ್ಯೆಯನ್ನು ಬೆಳಗಾವಿ ಜಿಜಾವು ಬ್ರಿಗೇಡ್ ತೀವ್ರವಾಗಿ ಖಂಡಿಸುತ್ತದೆ ಎಂದು ಬ್ರಿಗೇಡ್ ಅಧ್ಯಕ್ಷೆ ಡಾ.ಸೋನಾಲಿ ಸರ್ನೋಬತ್ ತಿಳಿಸಿದ್ದಾರೆ.
ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಪ್ರಸ್ತುತ ಸಮಾಜದಲ್ಲಿ ವಿಧ್ವಂಸಕ ಕೃತ್ಯಗಳು ನಡೆಯುತ್ತಿವೆ. ಜನರು ಸರಳ ಜೀವನ ನಡೆಸುವುದು ಕಷ್ಟಕರವಾಗಿದೆ. ಒಬ್ಬ ವ್ಯಕ್ತಿ ಹೇಗೆ ಬದುಕಬೇಕು ಎಂಬುದರ ಮೇಲೆ ಧಾರ್ಮಿಕ ದುಷ್ಟ ಶಕ್ತಿಗಳು ಪ್ರಭಾವ ಬೀರಲು ಪ್ರಾರಂಭಿಸಿವೆ. ದೆವ್ವ ಹಿಡಿದ ಅನ್ಯ ಧರ್ಮದ ಹೆಣ್ಣನ್ನು ಚುಡಾಯಿಸಿ, ದುಷ್ಟ ಪ್ರವೃತ್ತಿಗೆ ಕೊಂಡೊಯ್ಯುವ, ಧರ್ಮಕ್ಕೆ ಮತಾಂತರ ಮಾಡಿ ಮದುವೆಯಾಗಿ ಜೀವನ ಹಾಳು ಮಾಡಿಕೊಳ್ಳುವ ಹಾಗೆ ವರ್ತಿಸತೊಡಗಿದ್ದಾರೆ. ಇಂತಹ ಪ್ರವೃತ್ತಿಗೆ ಸಮಯಕ್ಕೆ ಕಡಿವಾಣ ಹಾಕಬೇಕು. ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸುತ್ತೇವೆ, ಇದರ ಹೊರತಾಗಿ ಈ ಕೊಲೆ ಪ್ರಕರಣದಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂಬುದರ ಸೂಚನೆಯಾಗಿದೆ. ನೇಹಾ ಹಿರೇಮಠ ಹತ್ಯೆ ಪ್ರಕರಣವನ್ನು ಬೆಳಗಾವಿ ಜಿಜಾವು ಬ್ರಿಗೇಡ್ ತೀವ್ರವಾಗಿ ಖಂಡಿಸುತ್ತದೆ ಎಂದು ಅವರು ತಿಳಿಸಿದ್ದಾರೆ.