ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯ 9 ತಾಲೂಕುಗಳ ಶಾಲೆ- ಕಾಲೇಜುಗಳಿಗೆ ಶುಕ್ರವಾರ (ಜುಲೈ 26) ರಜೆ ಘೋಷಿಸಲಾಗಿದೆ.
ವಿಪರೀತ ಮಳೆಯಾಗುತ್ತಿರುವುದರಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಯಲ್ಲಾಪುರ, ದಾಂಡೇಲಿ, ಹಳಿಯಾಳ ಹಾಗೂ ಜೊಯಿಡಾ ತಾಲೂಕಿನ ಎಲ್ಲ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಶಾಲೆಗಳು, ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ಐಟಿಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ(ಜುಲೈ 26) ರಜೆ ಘೋಷಿಸಲಾಗಿದೆ.
ಹವಾಮಾನ ಇಲಾಖೆಯು ಜೂನ್ 24ರ ಮಧ್ಯಾಹ್ನದಿಂದ ಜುಲೈ 26ರ ಬೆಳಿಗ್ಗೆ 8:30 ರ ವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿ ಆರೇಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯ ತಿಳಿಸಿದ್ದಾರೆ