ಲಖನೌ: ಮೂರು ಅಂತಸ್ತಿನ ಕಟ್ಟಡ ಕುಸಿದ ಪರಿಣಾಮ 8 ಮಂದಿ ಮೃತಪಟ್ಟು, 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಲಖನೌನ ಟ್ರಾನ್ಸ್ಪೋರ್ಟ್ನಗರದಲ್ಲಿ ನಡೆದಿದೆ. ಅವಶೇಷಗಳಡಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ.
ಶನಿವಾರ ಸಂಜೆ ಐದು ಗಂಟೆ ಸುಮಾರಿಗೆ ಅವಘಡ ಸಂಭವಿಸಿದ್ದು, ಈ ಕಟ್ಟಡವನ್ನು ಉಗ್ರಾಣವಾಗಿ ಬಳಸಿಕೊಳ್ಳಲಾಗುತ್ತಿತ್ತು ಎಂದು ವರದಿಯಾಗಿದೆ. ಮೂರನೇ ಮಹಡಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿತ್ತು ಹೀಗಾಗಿ ಅವಘಡ ಸಂಭವಿಸಿರಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಕುರಿತು ಮಾತನಾಡಿರುವ ರಕ್ಷಣಾ ತಂಡದ ಅಧಿಕಾರಿ ನವೀನ್ ಕುಮಾರ್, ಘಟನೆಯಲ್ಲಿ 25ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಶೇಷಗಳಡಿ ಹಲವರು ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.