ಬೆಳಗಾವಿ: ಮೇ 2 ಬುಧವಾರದಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಬೆಳಗಾವಿ ಲೋಕಸಭಾ ಚುನಾವಣಾ ನಿಮಿತ್ತ ಮಧ್ಯಾಹ್ನ 1ಕ್ಕೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಾಳೆಕುಂದರಗಿ ಕೆ.ಎಚ್ ಗ್ರಾಮಕ್ಕೆ ಆಗಮಿಸಿ ಚುನಾವಣಾ ಬಹಿರಂಗ ಸಭೆಯಲ್ಲಿ ಭಾಗವಹಿಸಿಲಿದ್ದಾರೆ.
ಸಂಜೆ 3.30 ಕ್ಕೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಖಾನಾಪುರ ಪಟ್ಟಣದ ಶಿವಾಜಿನಗರದಲ್ಲಿರುವ ಮಲಪ್ರಭಾ ಕ್ರೀಡಾಂಗಣದಲ್ಲಿ ಚುನಾವಣಾ ನಿಮಿತ್ತ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡು ಪ್ರಚಾರ ಕಾರ್ಯಕ್ರಮ ಮಾಡಲಿದ್ದು ಎರಡು ಲೋಕಸಭಾ ಕ್ಷೇತ್ರದ ಮತದಾರ ಬಂಧುಗಳು ಹಾಗೂ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಬೇಕೆಂದು ಬೆಳಗಾವಿ ಗ್ರಾಮಾಂತರ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುಭಾಷ್ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.