ಬೆಂಗಳೂರು:
ಕರ್ನಾಟಕ ಹಾಲು ಮಾರಾಟ ಮಹಾಮಂಡಳ (ಕೆಎಂಎಫ್) ಅಧ್ಯಕ್ಷ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದೆ.
ಅಧ್ಯಕ್ಷ ಸ್ಥಾನಕ್ಕೆ ಮಾಜಿ ಶಾಸಕ ಭೀಮಾ ನಾಯ್ಕ್ ಆಕಾಂಕ್ಷಿಯಾಗಿದ್ದು, ಬಹುತೇಕ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆ ಇದೆ.
ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಎಂದು ಕೆಎಂಎಫ್ ಹಾಲಿ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಕೆಎಂಎಫ್ ಅಧ್ಯಕ್ಷರ ಅವಧಿ ಇನ್ನೂ ಒಂದು ವರ್ಷವಿದೆ. ನನಗೆ ಎಲ್ಲಾ ನಿರ್ದೇಶಕರ ಬೆಂಬಲ ಇದ್ದರೂ ಸಂಸ್ಥೆಯ ಪ್ರಗತಿಗೆ ಹೊಸ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸದೆ ಮುಂದಿನ ಹೊಸ ಅಧ್ಯಕ್ಷರಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇನೆ ಎಂದು ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಹೊಸ ಅಧ್ಯಕ್ಷ ಸ್ಥಾನಕ್ಕೆ ಇಂದು ಮಧ್ಯಾಹ್ನ 1:00 ಗಂಟೆಗೆ ಚುನಾವಣೆ ನಡೆಯಲಿದೆ. ಹಗರಿಬೊಮ್ಮನಹಳ್ಳಿಯ ಮಾಜಿ ಶಾಸಕ ಭೀಮ ನಾಯಕ್ ಅಧ್ಯಕ್ಷರಾಗಿ ಆಯ್ಕೆಯಾಗುವುದು ಖಚಿತ. ಅವರೊಬ್ಬರೇ ನಾಮಪತ್ರ ಸಲ್ಲಿಸುವ ಸಾಧ್ಯತೆ ಇರುವುದರಿಂದ ಅವರ ಅವಿರೋಧ ಆಯ್ಕೆ ಆಗುವ ಸಾಧ್ಯತೆ ಇದೆ.