ಬೆಂಗಳೂರು : ಸ್ಥಳೀಯ ಸಂಸ್ಥೆಗಳ (ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿ) ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ದಿನಾಂಕ ಘೋಷಣೆಯಾಗಲಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಗಳಿಗೆ ಉಸ್ತುವಾರಿಗಳನ್ನಾಗಿ ನೇಮಕ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಏಳು ಉಸ್ತುವಾರಿಗಳನ್ನು ನೇಮಕ ಮಾಡಿದ್ದಾರೆ.
ಪಿ.ರಾಜೀವ : ಹಾವೇರಿ, ಹುಬ್ಬಳ್ಳಿ-ಧಾರವಾಡ, ಧಾರವಾಡ ಗ್ರಾಮಾಂತರ, ಗದಗ, ರಾಮನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರಕ್ಕೆ ಉಸ್ತುವಾರಿ
ಡಾ.ಶೈಲೇಂದ್ರ ಬೆಲ್ದಾಳೆ: ಬೀದರ, ಕಲಬುರಗಿ ನಗರ ಮತ್ತು ಕಲಬುರಗಿ ಗ್ರಾಮಾಂತರ, ಯಾದಗಿರಿ ಜಿಲ್ಲೆಗಳಿಗೆ ಉಸ್ತುವಾರಿ
ಅಶ್ವತ್ಥನಾರಾಯಣ : ಮೈಸೂರು, ಚಾಮರಾಜನಗರ, ಹಾಸನಕ್ಕೆ ಉಸ್ತುವಾರಿ
ಗಣೇಶ ಕಾರ್ಣಿಕ: ಕೊಡಗು, ದಕ್ಷಿಣ ಕನ್ನಡ, ಉಡುಪಿಗೆ ಉಸ್ತುವಾರಿ
ಎನ್.ರವಿಕುಮಾರ : ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ , ತುಮಕೂರು, ಮಧುಗಿರಿಗೆ ಉಸ್ತುವಾರಿ.
ಮಹೇಶ ಟೆಂಗಿನಕಾಯಿ: ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ವಿಜಯಪುರಕ್ಕೆ ಉಸ್ತುವಾರಿ
ಎಸ್.ಎನ್. ಚನ್ನಬಸಪ್ಪ : ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡಕ್ಕೆ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ.