ಮೂಡಲಗಿ:
ನವದೆಹಲಿಯಲ್ಲಿ ಇಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರನ್ನು ಭೇಟಿಯಾದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಬೆಳಗಾವಿಯಲ್ಲಿ ಎಫ್.ಎಂ ರೇಡಿಯೋ ಕೇಂದ್ರ ಮತ್ತು ಚಾನೆಲ್ಗಳ ಸ್ಥಾಪನೆಗೆ ಒತ್ತಾಯಿಸಿದರು.
ಅವರ ಮನವಿಗೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.