ಬೆಳಗಾವಿ :
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವ ಸಂಪುಟ ವಿಸ್ತರಣೆ ನಿರೀಕ್ಷೆ ಹುಟ್ಟಿಸಿದೆ. ಏಪ್ರಿಲ್, ಮೇ ತಿಂಗಳಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೂ ಮುನ್ನ ಬೊಮ್ಮಾಯಿ ಅವರು ಸಂಪುಟ ವಿಸ್ತರಣೆಗೆ ಮುಂದಾಗುವ ಸಾಧ್ಯತೆಯಿದ್ದು ಸಚಿವ ಸಂಪುಟ ಆಕಾಂಕ್ಷಿಗಳಲ್ಲಿ ಮತ್ತೆ ಸಚಿವರಾಗುವ ಆಸೆ ಗರಿಗೆದರಿದೆ.
ಬೆಳಗಾವಿ ಸುವರ್ಣ ಸೌಧದಲ್ಲಿ ವಿಧಾನಮಂಡಲದ ಅಧಿವೇಶನ ನಡೆಯುತ್ತಿರುವ ನಡೆವೆಯೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ದೆಹಲಿಗೆ ತೆರಳಲಿದ್ದಾರೆ.
ಇದು ಸಚಿವ ಸಂಪುಟ ಸೇರುವ ನಿರೀಕ್ಷೆಯಲ್ಲಿರುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ ಜಾರಕಿಹೊಳಿ ಅವರಿಗೆ ಶುಭ ಸಂದೇಶ ರವಾನಿಸುವ ಸಂಕೇತ ಇದೆ. ಇವರಿಬ್ಬರು ಸೇರಿ ಆರು ಜನರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ. ಮುಖ್ಯಮಂತ್ರಿಗಳು ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಜಯಪ್ರಕಾಶ್ ನಡ್ದಾ ಅವರನ್ನು ಭೇಟಿಯಾಗುವ ನಿರೀಕ್ಷೆ ಇದೆ. ಮುಂದಿನ ವಿಧಾನಸಭಾ ಚುನಾವಣೆ ಕಾರ್ಯತಂತ್ರದ ಬಗ್ಗೆಯೂ ಮುಖ್ಯಮಂತ್ರಿಗಳು ವರಿಷ್ಠರೊಂದಿಗೆ ಚರ್ಚಿಸುವ ಸಾಧ್ಯತೆ ಇದೆ. ಜನವರಿ ಮೊದಲ ವಾರ ಇಲ್ಲವೇ ಮಕರ ಸಂಕ್ರಾಂತಿ ವೇಳೆಗೆ ಸಂಪುಟ ವಿಸ್ತರಣೆಯಾಗುವ ನಡೆಯಬಹುದು.