ಬೆಂಗಳೂರು:
ರಾಜ್ಯದ ಎಲ್ಲಾ ಉಪನೋಂದಣಿ ಕಚೇರಿಗಳ ಕೆಲಸದ ಅವಧಿಯನ್ನು ಸೆಪ್ಟೆಂಬರ್ 23 ರಿಂದ ಜಾರಿಗೆ ಬರುವಂತೆ ಸೆಪ್ಟೆಂಬರ್ 30 ರವರೆಗೆ ಬೆಳಿಗ್ಗೆ 8 ಗಂಟೆಯಿಂದ ರಾತ್ರಿ 8 ಗಂಟೆವರೆಗೆ ಕಾರ್ಯ ನಿರ್ವಹಿಸಲು ಕಚೇರಿ ಅವಧಿಯನ್ನು ವಿಸ್ತರಿಸಿ ಆದೇಶಿಸಲಾಗಿದೆ.
ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕೇಂದ್ರ ಮೌಲ್ಯ ಮಾಪನ ಸಮಿತಿ 2023-24ನೇ ಸಾಲಿನಲ್ಲಿ ಸ್ಥಿರಾಸ್ತಿಗಳ ಮಾರುಕಟ್ಟೆ ಮೌಲ್ಯ ಮಾರ್ಗಸೂಚ ದರಗಳನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ನೋಂದಣಿಗೆ ಹಾಜರುಪಡಿಸುವ ದಸ್ತಾವೇಜುಗಳ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಕೆಲಸದ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ತಿಳಿಸಲಾಗಿದೆ.
ಸೆಪ್ಟೆಂಬರ್ 23ರಂದು ನಾಲ್ಕನೇ ಶನಿವಾರವದಂದೂ ಕೂಡ ಈ ಅವಧಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತದೆ. ಈ ಕೆಲಸದ ಅವಧಿಯು ಸೆಪ್ಟೆಂಬರ್ 30ರ ವರೆಗೆ ಮಾತ್ರ ಇದು ಜಾರಿಯಲ್ಲಿರುತ್ತದೆ. ಸಾರ್ವಜನಿಕರು ಸದುಪಯೋಗವನ್ನು ಪಡೆದುಕೊಳ್ಳಬಹುದು ಎಂದು ನೋಂದಣಿ ಮಹಾಪರಿವೀಕ್ಷಕರು ಮತ್ತು ಮುದ್ರಾಂಕಗಳ ಆಯುಕ್ತೆ ಬಿ.ಆರ್.ಮಮತಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.