ಧಾರವಾಡ : ಧಾರವಾಡ ರಂಗಾಯಣ ನಿರ್ದೇಶಕರಾಗಿದ್ದ
ಹಾಸ್ಯ ನಟ, ರಂಗಭೂಮಿ ಕಲಾವಿದ, ರಂಗಕರ್ಮಿ ರಾಜು ತಾಳಿಕೋಟಿ (62) ಸೋಮವಾರ ಮಣಿಪಾಲ್ದ ಕೆಎಂಸಿ ಆಸ್ಪತ್ರೆಯಲ್ಲಿ ತೀವ್ರ ಹೃದಯಘಾತದಿಂದ ನಿಧನರಾದರು ಎಂದು ಅವರ ಮಗ ಭರತ ತಾಳಿಕೋಟಿ ತಿಳಿಸಿದ್ದಾರೆ.
ಪ್ರಸ್ತುತ ಧಾರವಾಡ ರಂಗಾಯಣ ನಿರ್ದೇಶಕರಾಗಿ ಸೇವೆಯಲ್ಲಿದ್ದ ಅವರು, ಸಿನೆಮಾವೊಂದರ ಚಿತ್ರೀಕರಣಕ್ಕಾಗಿ ಕಳೆದ ವಾರ ಉಡುಪಿ ಜಿಲ್ಲೆಗೆ ಪ್ರಯಾಣ ಬೆಳೆಸಿದ್ದರು. ಹೆಬ್ರಿ ಬಳಿ ಶೂಟಿಂಗ್ ವೇಳೆ ಹೃದಯಾಘಾತದಿಂದ ಅಸುನೀಗಿದ್ದಾರೆ.
ಚಲನಚಿತ್ರದ ಚಿತ್ರೀಕರಣಕ್ಕಾಗಿ ಮಂಗಳೂರಿನಲ್ಲಿದ್ದ ರಾಜು ತಾಳಿಕೋಟಿ ಅವರಿಗೆ ಭಾನುವಾರ ರಾತ್ರಿ ತೀವ್ರ ಹೃಯಾಘಾತ ಆಗಿತ್ತು. ತಕ್ಷಣ ಅವರನ್ನು ಮಂಗಳೂರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆ ಫಲಿಸದೆ ಸೋಮವಾರ ಸಂಜೆ ಆಸ್ತತ್ರೆಯಲ್ಲಿ ನಿಧನರಾದರು.
ಮಂಗಳವಾರ ಅವರ ಊರು ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಚಿಕ್ಕಸಿಂದಗಿಯಲ್ಲಿ ಅಂತ್ಯಕ್ರಿಯೆ ಜರುಗಲಿದೆ ಎಂದು ಅವರ ಪುತ್ರ ಭರತ ತಾಳಿಕೋಟಿ ಅವರು ತಿಳಿಸಿದ್ದಾರೆ.
ಕಲಿಯುಗದ ಕುಡುಕ ಸೇರಿದಂತೆ ಅನೇಕ ಉತ್ತರ ಕರ್ನಾಟಕದ ಹಾಸ್ಯ ನಾಟಕಗಳಲ್ಲಿ ಅಭಿನಯಿಸಿ ಮನೆಮಾತಾಗಿದ್ದರು. ಸಿನಿಮಾಗಳಲ್ಲೂ ನಟಿಸಿ ಸೈ ಎನಿಸಿಕೊಂಡಿದ್ದರು.
ರಾಜು ತಾಳಿಕೋಟಿ ಅವರು ಮೂಲತಃ ವಿಜಯಪುರ ಜಿಲ್ಲೆಯ ತಾಳಿಕೋಟಿಯವರಾಗಿದ್ದರು. ಇತ್ತೀಚೆಗೆ ರಂಗಾಯಣ ಧಾರವಾಡದ ನಿರ್ದೇಶಕರಾಗಿದ್ದರು.