ನಾಡಿನ ಹಿರಿಯ ಸಾಹಿತಿ ಕಮಲಾ ಹಂಪನಾ (88) ನಿಧನರಾಗಿದ್ದಾರೆ. ವಯೋಸಹಜ ಸಮಸ್ಯೆ ಎದುರಿಸುತ್ತಿದ್ದ ಅವರು ಬೆಂಗಳೂರಿನಲ್ಲಿ ಪುತ್ರಿಯ ನಿವಾಸದಲ್ಲಿ ವಾಸವಾಗಿದ್ದರು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದುಕೊಂಡು ಹೋದರೂ ಪ್ರಯೋಜನವಾಗಲಿಲ್ಲ. ಇದೀಗ ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ದೇಹವನ್ನು ಲೀಲಾವತಿ ಆಸ್ಪತ್ರೆಗೆ ದಾನ ಮಾಡಲಾಗುವುದು.
ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದ ಶನಿವಾರ ಮೃತಪಟ್ಟಿದ್ದಾರೆ.
ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ. ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ.
ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಅಮೆರಿಕನ್ ಡಾಲರ್ಸ್ ಕಾಲೊನಿಯಲ್ಲಿ ಇರುವ ಪುತ್ರಿ ಆರತಿ ಮನೆಯಲ್ಲಿ ವಾಸವಿದ್ದರು. ಶುಕ್ರವಾರ ರಾತ್ರಿ 10 ಗಂಟೆ ವೇಳೆಗೆ ಅವರಿಗೆ ಹೃದಯಾಘಾತ ಆಗಿತ್ತು. ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.
ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಅವರ ದೇಹವನ್ನು ರಾಮಯ್ಯ ಆಸ್ಪತ್ರೆಗೆ ದಾನ ಮಾಡಿದ್ದಾರೆ.
ಕಮಲಾ ಹಂಪನಾ ತಮ್ಮ ಅಧ್ಯಯನ, ಅಧ್ಯಾಪನ, ಲೇಖನ, ಭಾಷಣ ಮತ್ತು ಸಂಶೋಧನೆಗಳಿಂದ 60 ವರ್ಷಗಳಕಾಲ ಸಾಹಿತ್ಯ ಕ್ಷೇತ್ರದಲ್ಲಿ ಅವಿರತವಾಗಿ ಕೃಷಿ ಮಾಡಿದ್ದಾರೆ.
ಮೂಡುಬಿದರೆಯಲ್ಲಿ ನಡೆದ 71ನೆ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ, ಸರ್ಕಾರದ ಪುರಸ್ಕಾರವಾದ ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯವು ಕೊಡಮಾಡುವ ನಾಡೋಜ ಪ್ರಶಸ್ತಿ ಸಂದಿವೆ. ಅವರ ಸಮಗ್ರ ಸಾಹಿತ್ಯವನ್ನು ಒಳಗೊಂಡ ಒಂಬತ್ತು ಬೃಹತ್ ಸಂಪುಟಗಳು ಹೊರಬಂದಿವೆ. ಸಂಶೋಧನೆ ಅವರ ಮೊದಲ ಆಯ್ಕೆಯಾಗಿತ್ತು.
ಪ್ರಕಟವಾದ 60ಕ್ಕೂ ಹೆಚ್ಚು ಕೃತಿಗಳಲ್ಲಿ ಸೃಜನಕೃತಿಗಳೂ ಸೇರಿವೆ. ನಾಟಕ, ಕತೆಗಳು ಮತ್ತು ವಚನಗಳಲ್ಲಿ ಸೃಷ್ಟಿಶಕ್ತಿಯ ವಿನ್ಯಾಸ ಕೆನೆಕಟ್ಟಿದೆ. ಬಿಂದಲಿ, ಬುಗುಡಿ ಹಾಗೂ ಬಯಲು ಇವು ಆಧುನಿಕ ವಚನಗಳಿರುವ ಸಂಕಲನಗಳಾಗಿವೆ.