ಬೆಂಗಳೂರು: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರಿಗೆ ಪೊಕ್ಸಿ ಪ್ರಕರಣದಲ್ಲಿ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸರು ಸಲ್ಲಿಸಿದ್ದ ಅರ್ಜಿ ಮನ್ನಿಸಿದ ಕೋರ್ಟ್ ಯಡಿಯೂರಪ್ಪಗೆ ಬಂಧನದ ವಾರೆಂಟ್ ಜಾರಿಗೊಳಿಸಿತ್ತು. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್ ದೀಕ್ಷಿತ್ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗಲು ಸಿದ್ಧರಿದ್ದೀರಾ? ಎಂದು ಯಡಿಯೂರಪ್ಪ ಪರ ವಕೀಲರಿಗೆ ಹೈಕೋರ್ಟ್ ಪ್ರಶ್ನೆ ಮಾಡಿದ್ದು, ಹೈಕೋರ್ಟ್ ಆದೇಶ ಪಾಲಿಸಲಾಗುವುದು ಎಂದು ಸಿ.ವಿ.ನಾಗೇಶ್ ಹೇಳಿದ್ದಾರೆ.
ಎಫ್ಐಆರ್ ನಂತರ ತನಿಖೆ ಯಾವಾಗ ಆರಂಭವಾಯಿತು ಎಂದು ಹೈಕೋರ್ಟ್ ಪ್ರಶ್ನಿಸಿ ಮಾರ್ಚ್ 14ರ ಎಫ್ಐಆರ್ ನಂತರ ಏ.12ರಂದು ನೋಟಿಸ್ ನೀಡಿದ್ದಾರೆ. ಅಲ್ಲಿಯವರೆಗೆ ಪೊಲೀಸರು ಏನು ಮಾಡಿದರೆಂಬುದು ತಿಳಿದಿಲ್ಲ ಎಂದು ಸಿ.ವಿ.ನಾಗೇಶ್ ವಾದಿಸಿದರು.
ಈಗ ಬಿಎಸ್ವೈ ಬಂಧನ ಏಕೆ ಬೇಕಾಗಿದೆ ಎಂದು ಹೈಕೋರ್ಟ್ ಮರು ಪ್ರಶ್ನಿಸಿದ್ದು, ಜೂನ್ 12ರಂದು ಹಾಜರಾಗುವಂತೆ ಬಿಎಸ್ವೈಗೆ ನೋಟಿಸ್ ನೀಡಲಾಗಿತ್ತು. ಮೊಬೈಲ್ನಲ್ಲಿದ್ದ ವಿಡಿಯೋ, ಧ್ವನಿ ಪರೀಕ್ಷೆ ನಂತರ ನೋಟಿಸ್ ನೀಡಲಾಯಿತು. ಹಾಜರಾಗದ ಕಾರಣಕ್ಕೆ ಬಂಧನದ ವಾರಂಟ್ ಪಡೆಯಲಾಗಿದೆ. ಮೇ 13ರಂದು ಎಫ್ಎಸ್ಎಲ್ ವರದಿ ಬಂದಿದೆ. ಸುಟ್ಟ ಮೊಬೈಲ್ ಚಿಪ್ ನಲ್ಲಿದ್ದ ಡಾಟಾ ತೆಗೆಯಲು ಗುಜರಾತ್ FSLA ಕಳುಹಿಸಲಾಯಿತು. ಅದಾದ ನಂತರ ಧ್ವನಿ ಪರೀಕ್ಷೆಗೆ ಬೆಂಗಳೂರು ಎಫ್ಎಸ್ಎಲ್ಗೆ ಕಳುಹಿಸಲಾಯಿತು ಎಂದು ಹೈಕೋರ್ಟ್ಗೆ ಎಡಿಜಿಪಿ ಬಿ.ಕೆ.ಸಿಂಗ್ ಹೇಳಿದ್ದಾರೆ.
ಬಿಎಸ್ವೈ ಮನೆಯಲ್ಲಿಯೇ ಈ ಘಟನೆ ನಡೆದಿದೆ. ಅವರ ಮನೆಯಲ್ಲಿನ ಸಿಸಿ ಟಿವಿ ದೃಶ್ಯಾವಳಿ ಸೀಜ್ ಮಾಡಿಲ್ಲ. ತನಿಖೆ ಹೇಗೆ ನಡೆಸಬೇಕೆಂಬುದನ್ನ ತನಿಖಾಧಿಕಾರಿ ನಿರ್ಧರಿಸಬೇಕು ಎಂದು ಹೈಕೋರ್ಟ್ ಹೇಳಿದ್ದಾರೆ.