ಬೆಂಗಳೂರು : ಪ್ರಜ್ವಲ್ ರೇವಣ್ಣ ಲೈಂಗಿಕ ಪ್ರಕರಣದ ಕುರಿತು ಎಸ್ಐಟಿ ತನಿಖೆ ಚುರುಕುಗೊಳಿಸಿದ್ದು, ಇಂದೇ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿತ್ತು. ಹೀಗಾಗಿ, ಪ್ರಜ್ವಲ್ ಪರ ವಕೀಲ ಅರುಣ್ ಜಿ. ಅವರು ಎಸ್ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಧಿಕಾರಿಗಳು ನೀಡಿರುವ ನೋಟಿಸ್ಗೆ ಉತ್ತರ ನೀಡಿರುವ ವಕೀಲ ಅರುಣ್, ‘ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಅವರು ಸದ್ಯ ಪ್ರವಾಸದಲ್ಲಿದ್ದಾರೆ. 7 ದಿನ ಕಾಲಾವಕಾಶ ನೀಡಿ. ನಂತರ, ಮತ್ತೊಂದು ದಿನಾಂಕ ನೀಡಿ. ಅಂದು ಅವರು ವಿಚಾರಣೆಗೆ ಹಾಜರಾಗುತ್ತಾರೆ’ ಎಂದಿದ್ದಾರೆ.
ಈ ಬೆನ್ನಲ್ಲೇ ಪ್ರಜ್ವಲ್, ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲ, ನನ್ನ ವಕೀಲರ ಮೂಲಕ CID ಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.