ಬೆಳಗಾವಿ: ಮದುವೆ ಆಗುವುದಾಗಿ ನಂಬಿಸಿ ನನ್ನ ಜೊತೆ ದೈಹಿಕ ಸಂಬಂಧ ಬೆಳೆಸಿ ಈಗ ಆತ ವಂಚನೆ ಮಾಡಿದ್ದಾನೆ ಎಂದು ಸುಮಾರು 30 ವರ್ಷದ ಮಹಿಳೆಯೊಬ್ಬರು ಇದೀಗ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. 2022 ರಲ್ಲಿ ವ್ಯಕ್ತಿಯೊಬ್ಬ ನನ್ನನ್ನು ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಬಂಧ ಬೆಳೆಸಿದ್ದ. ಆದರೆ, ಆತ ಹಾಗೂ ನನ್ನ ನಡುವೆ ಮದುವೆಯಾಗಿಲ್ಲ. ಈಗ ಆತ ನನಗನಿಂದ ದೂರವಾಗಿರುವುದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಪಿ ರೋಹನ್ ಜಗದೀಶ ಅವರು, ಮಹಿಳೆ ನೀಡಿರುವ ದೂರು ಆಧರಿಸಿ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ತಿಳಿಸಿದ್ದಾರೆ.