ಬೆಳಗಾವಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ಉಪಮೇಯರ್ ಸ್ಥಾನ ಒಬಿಸಿ ಮಹಿಳೆಗೆ ಮೀಸಲಾಗಿದೆ.
ಬೆಳಗಾವಿ :
ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಚುನಾವಣೆ ಸನ್ನಿಹಿತವಾಗಿದೆ.
ಬೆಳಗಾವಿ ಪ್ರಾದೇಶಿಕ ಆಯುಕ್ತರು ಇಷ್ಟರಲ್ಲೇ ಚುನಾವಣೆಗೆ ದಿನ ಘೋಷಿಸುವ ಸಾಧ್ಯತೆ ಇದೆ. ನಗರಾಭಿವೃದ್ಧಿ ಇಲಾಖೆ ಅಧೀನ ಕಾರ್ಯದರ್ಶಿಗಳು ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆದಿದ್ದು 21ನೇ ಅವಧಿಯ ಮೇಯರ್ ಮತ್ತು ಉಪಮೇಯರ್ ಸ್ಥಾನಗಳಿಗೆ ಮೀಸಲಾತಿ ಪರಿಶೀಲಿಸಿ ಅದರಂತೆ ಬೆಳಗಾವಿ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಸ್ಥಾನಗಳ ಚುನಾವಣೆ ನಿಯಮಾನುಸಾರ ನಡೆಸಲು ಕ್ರಮ ಕೈಗೊಳ್ಳುವಂತೆ ನಗರಾಭಿವೃದ್ಧಿ ಇಲಾಖೆ ಸರಕಾರದ ಅಧೀನ ಕಾರ್ಯದರ್ಶಿ ಟಿ.ಮಂಜುನಾಥ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.