ಮೈಸೂರು: ಇಲ್ಲಿನ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ( ಮುಡಾ) ಅಧ್ಯಕ್ಷ ಕೆ. ಮರೀಗೌಡ ತಮ್ಮ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದರು.
ಬೆಂಗಳೂರಿನಲ್ಲಿ ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗೆ ಅವರು ರಾಜೀನಾಮೆ ಪತ್ರ ಸಲ್ಲಿಸಿದರು.
‘ರಾಜೀನಾಮೆ ಸಲ್ಲಿಸುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದರು. ಅಲ್ಲದೇ ನನ್ನ ಆರೋಗ್ಯವೂ ಸರಿಯಿಲ್ಲ. ಈ ಕಾರಣಕ್ಕೆ ರಾಜೀನಾಮೆ ನೀಡಿದ್ದೇನೆ’ ಎಂದು ಮರೀಗೌಡ ಮಾಧ್ಯಮದವರಿಗೆ ತಿಳಿಸಿದ್ದಾರೆ.