ಬೆಂಗಳೂರು : ಬೆಳಗಾವಿ ಚಳಿಗಾಲದ ಅಧಿವೇಶನ ಡಿಸೆಂಬರ್ 8 ರಿಂದ 19 ರವರೆಗೆ ನಡೆಯಲಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ದಿನಾಂಕ 13-11-2025 ರಂದು ನಡೆದ ಸಚಿವ ಸಂಪುಟದ
ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪ್ರಮುಖ ನಿರ್ಣಯಗಳು:
ಮೇಕೆದಾಟು ಯೋಜನೆ:
ಮೇಕೆದಾಟು ಯೋಜನೆಯಲ್ಲಿ ಕರ್ನಾಟಕದ ಹೋರಾಟಕ್ಕೆ ಗೆಲುವು ದೊರೆತಿದೆ. ಯೋಜನೆಯ ಬಗ್ಗೆ ಕಾರ್ಯಪ್ರವೃತ್ತರಾಗಲು ಹಸಿರುನಿಶಾನೆ ದೊರಕಿದ್ದು, ಈ ಹೋರಾಟದಲ್ಲಿ ಬೆಂಬಲವಾಗಿ ನಿಂತಿದ್ದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಅಭಿನಂದಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವರು ತಿಳಿಸಿದರು.
ಮೇಕೆದಾಟು ಯೋಜನೆಗೆ 7 ವರ್ಷದಿಂದ ಅಡ್ಡಗಾಲು ಹಾಕಿದ್ದ ತಮಿಳುನಾಡು, ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸರ್ವೋಚ್ಛ ನ್ಯಾಯಾಲಯ ವಜಾಗೊಳಿಸಿದೆ.ಮೇಕೆದಾಟು ಯೋಜನೆ ಇನ್ನೂ ಆರಂಭಿಕ ಹಂತದಲ್ಲಿದೆ. ಯಾವುದೇ ನಿರ್ಮಾಣ ಕಾರ್ಯ ಚಾಲನೆ ದೊರೆತಿರುವುದಿಲ್ಲ ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿರುವ ಕಾರಣ, ಸುಪ್ರೀಂಕೋರ್ಟ್ ಈ ವಿಷಯದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ತಿಳಿಸಿರುವುದಾಗಿ ಸಚಿವರು ವಿವರಿಸಿದರು.
· ಬೆಳಗಾವಿಯಲ್ಲಿ ಡಿಸೆಂಬರ್ 8 ರಿಂದ ಚಳಿಗಾಲದ ಅಧಿವೇಶನ ನಡೆಯಲಿದೆ ಎಂದರು.
· ಸಚಿವ ಸಂಪುಟದ ಉಪಸಮಿತಿಗಳು ಆರು ತಿಂಗಳ ಅವಧಿ ಮೀರಿ ವರದಿಯನ್ನು ಸಲ್ಲಿಸಿರಲಿಲ್ಲ. ಕೋವಿಡ್ ಸಂದರ್ಭದಲ್ಲಿ ನಡೆದಿರುವ ಖರೀದಿಗಳ ಮೇಲೆ ನ್ಯಾ. ಮೈಕಲ್ ಡಿ.ಕುನ್ಹಾ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ವಿಚಾರಣಾ ಆಯೋಗದ ಮೇಲೆ ತೆಗೆದುಕೊಳ್ಳಲಾಗುವ ಕ್ರಮಗಳ ಮೇಲೆ ಮೇಲುಸ್ತುವಾರಿ ಮಾಡಲು ಹಾಗೂ ಉನ್ನತ ಮಟ್ಟದ ಸಮಿತಿಯ ವರದಿಗಳನ್ನು ಮಾಡಲು ಸೂಕ್ತ ಶಿಫಾರಸ್ಸುಗಳನ್ನು ಮಾಡುವ ಪಸಮಿತಿ, ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಗಳ ಬಗ್ಗೆ ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ನೇಮಿಸಲಾಗಿರುವ ಸಮತಿ, ಬೆಂಗಳೂರು – ಮೈಸೂರು ಮೂಲಸೌಕರ್ಯ ಕಾರಿಡಾರ್ ಅನುಷ್ಠಾನದ ಕುರಿತು ಈವರೆಗೆ ಆಗಿರುವ ಪ್ರಗತಿ ಹಾಗೂ ಮುಂದೆ ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಪರಾಮರ್ಶಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ಉಪಸಮಿತಿಗಳು ವರದಿಗಳನ್ನು ಆದಷ್ಟು ಶೀಘ್ರದಲ್ಲಿ ವರದಿ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.
· ರಾಯಚೂರು ಜಿಲ್ಲೆ, ಮಾನ್ವಿ ತಾಲ್ಲೂಕಿನ ಮುದ್ಲಾಪುರ ಏತ ನೀರಾವರಿ ಯೋಜನೆಯ ಬಾಕಿ ಕೆಲಸಗಳು ಹಾಗೂ ಪುನರುಜ್ಜೀವನ ಕಾಮಗಾರಿಗಳನ್ನು ರೂ.21.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ
· ರಾಯಚೂರು ಜಿಲ್ಲೆ, ಮಾನ್ವಿ ತಾಲ್ಲೂಕಿನ ದದ್ದಲ್ ಗ್ರಾಮದ ಹತ್ತಿರ (ಗೌರಮ್ಮ ಬಂಡಿ) ಏತ ನೀರಾವರಿ ಯೋಜನೆಯ ಬಾಕಿ ಕೆಲಸಗಳು ಹಾಗೂ ಪುನರುಜ್ಜೀವನ ಕಾಮಗಾರಿಗಳನ್ನು ರೂ.34.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಧರಿಸಿದೆ
· ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024ರ ವಿವಿಧ ಕಲಂಗಳಿಗೆ ತಿದ್ದುಪಡಿ ತರುವ ಉದ್ದೇಶದ ಅನುಬಂಧ-1 ರಲ್ಲಿನ ಗ್ರೇಟರ್ ಬೆಂಗಳೂರು ಆಡಳಿತ (ಎರಡನೇ ತಿದ್ದುಪಡಿ) ವಿಧೇಯಕ, 2025ಕ್ಕೆ ಅನುಮೋದನೆ ಸಚಿವ ಸಂಪುಟ ನಿರ್ಣಯಿಸಿ, ಮುಂದಿನ ಅಧಿವೇಶನದಲ್ಲಿ ವಿಧೇಯಕ ಮಂಡಿಸಲು ತೀರ್ಮಾನಿಸಲಾಯಿತು. ಸರ್ಕಾರದ ಮುಖ್ಯ ಕಾರ್ಯದರ್ಶಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ನಗರಾಭಿವೃದ್ಧಿ ಇಲಾಖೆ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ/ಪ್ರಧಾನ ಕಾರ್ಯದರ್ಶಿ, ಆರ್ಥಿಕ ಇಲಾಖೆ ಇವರನ್ನು ಪ್ರಾಧಿಕಾರದ ಸದಸ್ಯರ ಪಟ್ಟಿಗೆ ಸೇರಿಸುವುದು.
ಲೋಕಸಭೆ, ರಾಜ್ಯಸಭೆ, ರಾಜ್ಯವಿಧಾನಸಭೆ ಮತ್ತು ರಾಜ್ಯ ವಿಧಾನ ಪರಿಷತ್ತಿನ ಮಾನ್ಯ ಸದಸ್ಯರನ್ನು ಪ್ರಾಧಿಕಾರದ ಸದಸ್ಯರನ್ನಾಗಿ ನೇಮಕ ಮಾಡುವ ಬಗ್ಗೆ ಹೆಚ್ಚಿನ ಸ್ಪಷ್ಟನೆಯನ್ನು ತರುವ ಉದ್ದೇಶದಿಂದ ಕಲಂ 09ರ ಉಪ ಕಲಂ 05 ಅನ್ನು ಬದಲಾಯಿಸಲು ನಿರ್ಧರಿಸಿದೆ.
· ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬರುವ, ಐದು ನಗರ ಪಾಲಿಕೆಗಳ ಮುಖ್ಯ ಮತ್ತು ಉಪಮುಖ್ಯ ರಸ್ತೆಗಳ ಸ್ವಚ್ಛತೆಗಾಗಿ ಯಾಂತ್ರಿಕ ಕಸಗುಡಿಸುವಿಕೆ ಯಂತ್ರಗಳನ್ನು (Mechanical Sweeping Machine) ಬಾಡಿಗೆ ಆಧಾರದಲ್ಲಿ 84 ತಿಂಗಳುಗಳ (07 ವರ್ಷ) ಅವಧಿಗೆ ಪಡೆಯಲು ಉದ್ದೇಶಿಸಿರುವ ಯೋಜನೆಯ ಅಂದಾಜು ಮೊತ್ತವನ್ನು ಆಯಾ ಪಾಲಿಕೆಗಳಿಂದ ಮಿತಿಗೊಳಿಸಲಾದ ಒಟ್ಟು ಮೊತ್ತ ರೂ.613.25 (ಜಿಎಸ್ಟಿ ಒಳಗೊಂಡAತೆ) ಕೋಟಿಗಳ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಿದೆ.
· ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರತಿದಿನ ಸಂಗ್ರಹವಾಗುವ 150 ಟನ್ಗಳಷ್ಟು ಹಸಿ ತ್ಯಾಜ್ಯವನ್ನು Compressed Bio Gas (CBG) ಘಟಕದ ಮೂಲಕ ಸಂಸ್ಕರಿಸಲು Gas Authority of India Limited (GAIL) ಸಂಸ್ಥೆಗೆ ತುರುಮುರಿ ತ್ಯಾಜ್ಯ ನಿರ್ವಹಣೆ ಪ್ರದೇಶದಲ್ಲಿ 10 ಎಕರೆ ಜಾಗವನ್ನು 25 ವರ್ಷಗಳ ಅವಧಿಗೆ Norminal Lease Rate ಆಧಾರದ ಮೇಲೆ ವಹಿಸಿಕೊಡಲು ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.
· ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಮಾನಿಟರಿಂಗ್, ನಿಯಂತ್ರಣ ಮತ್ತು ಮೇಲ್ವಿಚಾರಣೆಗಾಗಿ 12003 ಮೀನುಗಾರಿಕಾ ದೋಣಿಗಳಿಗೆ ರೂ.43.69 ಕೋಟಿಗಳ ವೆಚ್ಚದಲ್ಲಿ (ಕೇಂದ್ರ: ರೂ.26.21 ಕೋಟಿ, ರಾಜ್ಯ: ರೂ.17.48 ಕೋಟಿ) ದ್ವಿಮುಖ ಸಂಪರ್ಕ ಸಾಧನಗಳನ್ನು ಅಳವಡಿಸಲು ಕೇಂದ್ರ ಸರ್ಕಾರದಿಂದ ಅನುಮೋದಿಸಲ್ಪಟ್ಟ ISಖಔ ರವರ ವಾಣಿಜ್ಯ ಸಂಸ್ಥೆಯಾದ Gas Authority of India Limited (GAIL ರವರ ಮೂಲಕ ಅನುಷ್ಠಾನಗೊಳಿಸಲು; ಸಚಿವ ಸಂಪುಟ ಅನುಮೋದಿಸಿದೆ.
· “ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) (ಕೋರ್ಟ್ ಮ್ಯಾನೇಜರ್ಗಳ ವಿಲೀನಾತಿ) (ವಿಶೇಷ) ನಿಯಮಗಳು, 2025” ಮತ್ತು ಕರ್ನಾಟಕ ಅಧೀನ ನ್ಯಾಯಾಲಯಗಳು (ಲಿಪಿಕ ಮತ್ತು ಇತರ ಹುದ್ದೆಗಳು) ಕೋರ್ಟ್ ಮ್ಯಾನೇಜರ್ಗಳ ನೇಮಕಾತಿ ಮತ್ತು ಸೇವಾ ಷರತ್ತುಗಳು (ವಿಶೇಷ) ನಿಯಮಗಳು, 2025ರ ಕರಡನ್ನು ಹೊರಡಿಸಲು ಮತ್ತು ಬಾಧಿತ ವ್ಯಕ್ತಿಗಳಿಂದ ಎರಡೂ ನಿಯಮಗಳಿಗೆ ಆಕ್ಷೇಪಣೆಗಳನ್ನು ಆಹ್ವಾನಿಸಲು; ಹಾಗೂ ನಿಗದಿತ ಅವಧಿಯೊಳಗೆ ಯಾವುದೇ ಆಕ್ಷೇಪಣೆಗಳು/ಸಲಹೆಗಳು ಸ್ವೀಕೃತವಾಗದಿದ್ದಲ್ಲಿ ಅಥವಾ ಸ್ವೀಕರಿಸಬಹುದಾದ ಯಾವುದೇ ಆಕ್ಷೇಪಣೆಗಳು/ಸಲಹೆಗಳನ್ನು ಪರಿಗಣಿಸಿದ ನಂತರ ಯಾವುದೇ ಪ್ರಮುಖ ಮಾರ್ಪಾಡುಗಳನ್ನು ಮಾಡದಿದ್ದಲ್ಲಿ, ಸದರಿ ಕರಡು ನಿಯಮಗಳನ್ನು ಸಚಿವ ಸಂಪುಟದ ಮುಂದೆ ಮರುಸಲ್ಲಿಸದೆ ಅಂತಿಮಗೊಳಿಸಲು; ಸಚಿವ ಸಂಪುಟ ನಿರ್ಣಯಿಸಿದೆ.
· “ಕರ್ನಾಟಕ ಪೌರಸಭೆಗಳ ಕಾಯ್ದೆ 1964ರ ಕಲಂ-3, 9 ಮತ್ತು 361 ರನ್ವಯ ಶೆಡ್ಯೂಲ್-ಎ ರಲ್ಲಿ ಒಳಗೊಂಡ ಪ್ರದೇಶ ಹಾಗೂ ಶೆಡ್ಯೂಲ್-ಬಿ ರಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಬೀದರ್ ಜಿಲ್ಲೆಯ ಹಾಲಿ ಭಾಲ್ಕಿ ಪುರಸಭೆಯಿಂದ ನಗರಸಭೆಯನ್ನು ರಚಿಸಿ ‘ಭಾಲ್ಕಿ ನಗರಸಭೆ’ ಪ್ರದೇಶವೆಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಣಯಿಸಿದೆ.
· ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 250 ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಾರಂಭಕ್ಕೆ ಅಗತ್ಯವಿರುವ ವೈದ್ಯಕೀಯ ಉಪಕರಣ ಮತ್ತು ಪೀಠೋಪಕರಣಗಳನ್ನು ರೂ.27.92 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ನಿರ್ಣಯಿಸಿದೆ.
· ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಾಣವಾಗಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ನೆಲ ಮತ್ತು ಮೊದಲನೇ ಮಹಡಿಗೆ ಅವಶ್ಯವಿರುವ ಸರ್ವೀಸಸ್ ಗಳನ್ನು ರೂ.21.00 ಕೋಟಿಗಳ ಅಂದಾಜು ಮೊತ್ತದಲ್ಲಿ ಅಳವಡಿಸುವ ಕಾಮಗಾರಿಯನ್ನು ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
· ಕರ್ನಾಟಕ ಬಾಹ್ಯಾಕಾಶ ತಂತ್ರಜ್ಞಾನ ನೀತಿ, 2025-2030”ಕ್ಕೆ ಅನುಮೋದನೆ ನೀಡಿದೆ.
· ಕರ್ನಾಟಕ ಮಾಹಿತಿ ತಂತ್ರಜ್ಞಾನ ನೀತಿ, 2025-2030 ಗೆ ಅನುಮೋದನೆ ನೀಡಿದೆ.
· ಸ್ಥಳೀಯ ಆರ್ಥಿಕ ಆಕ್ಸಿಲೇಟರ್ ಕಾರ್ಯಕ್ರಮ (LEAP) ಅಡಿಯಲ್ಲಿ ಐದು ವರ್ಷಗಳ ಅವಧಿಯಲ್ಲಿ ಒಟ್ಟು ರೂ.18.00 ಕೋಟಿ ಆಯವ್ಯದೊಂದಿಗೆ ರಕ್ಷಣಾ ತಂತ್ರಜ್ಞಾನ ಮತ್ತು ಕೈಗಾರಿಕೆ 5.0ರಲ್ಲಿ ಉತ್ಕೃಷ್ಟತಾ ಕೇಂದ್ರದ (CoE) ಸ್ಥಾಪನೆ ಹಾಗೂ ಉತ್ಕೃಷ್ಟತಾ ಕೇಂದ್ರವನ್ನು ಸ್ಥಾಪಿಸಲು ಮತ್ತು ಕಾರ್ಯಗತಗೊಳಿಸಲು ಅನುಷ್ಟಾನ ಪಾಲುದಾರರಾಗಿ ಧಾರ್ತಿ ಪ್ರತಿಷ್ಠಾನ, ಐಐಟಿ ಧಾರವಾಡರವರನ್ನು ನಿಗದಿಪಡಿಸಲು; ಸಚಿವ ಸಂಪುಟ ನಿರ್ಣಯಿಸಿದೆ. ಪ್ರಸಕ್ತ ಸಾಲಿನಲ್ಲಿ LEAP ಕಾರ್ಯಕ್ರಮಕ್ಕಾಗಿ ರೂ.200.00 ಕೋಟಿ ಅನುದಾನವನ್ನು ಒದಗಿಸಲಾಗಿದೆ. ಈ ಕಾರ್ಯಕ್ರಮಗಳಿಂದ ರಾಜ್ಯಾದ್ಯಂತ ಐದು ಲಕ್ಷ ಹೊಸ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದೆ.
· ಚಿತ್ರದುರ್ಗ ಜಿಲ್ಲೆ, ಮೊಳಕಾಲ್ಮುರು ತಾಲ್ಲೂಕು, ಸೊಲೇನಹಳ್ಳಿ ಗ್ರಾಮದ ಸ.ನಂ.22 ರಲ್ಲಿ 0.06 ಗುಂಟೆ ಜಮೀನನ್ನು ಕಾಂಗ್ರೆಸ್ ಕಚೇರಿ ಕಟ್ಟಡ ನಿರ್ಮಾಣಕ್ಕಾಗಿ ಕಾಂಗ್ರೆಸ್ ಭವನ ಟ್ರಸ್ಟ್, ಬೆಂಗಳೂರು ಇವರಿಗೆ ಮಾರ್ಗದರ್ಶಿ ಮೌಲ್ಯದ ಶೇ.5% ರಷ್ಟು ವೆಚ್ಚಕ್ಕೆ ಮಂಜೂರಾತಿ ನೀಡಲು; ಸಚಿವ ಸಂಪುಟ ನಿರ್ಧರಿಸಿದೆ.
· ಬೀದರ್ ಜಿಲ್ಲೆಯ ಕಮಲನಗರ ಗ್ರಾಮ ಪಂಚಾಯಿತಿಯಿಂದ ಪಟ್ಟಣ ಪಂಚಾಯಿತಿಯನ್ನು ರಚಿಸಿ ಸದರಿ ಪ್ರದೇಶವನ್ನು ಕಮಲನಗರ ಪಟ್ಟಣ ಪಂಚಾಯಿತಿ ಎಂದು ಉದ್ಘೋಷಿಸಲು; ಸಚಿವ ಸಂಪುಟ ನಿರ್ಧರಿಸಿದೆ.
· ಮೈಸೂರು ನಗರದಲ್ಲಿ ಸರ್ಕಾರಿ ಅತಿಥಿ ಗೃಹದ ನೌಕರರ ವಸತಿ ಗೃಹಗಳ ಆವರಣದಲ್ಲಿ ಶಾಸಕರ ಹಾಗೂ ಸಂಸದರ ಭವನವನ್ನು ರೂ.15.00 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಅನುಮೋದನೆ ನೀಡಲು; ಸಚಿವ ಸಂಪುಟ ನಿರ್ಣಯಿಸಿದೆ.


