ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಎಂಎಲ್ಸಿ ಸೂರಜ್ ರೇವಣ್ಣಗೆ ಷರತ್ತುಬದ್ಧ ಜಾಮೀನು ಮಂಜೂರಾಗಿದೆ. ಹೊಳೆನರಸೀಪುರ ಟೌನ್ನಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ಸೂರಜ್ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಿದೆ.
ಸದ್ಯ ಒಂದು ಪ್ರಕರಣದಲ್ಲಿ ಜಾಮೀನು ಮಂಜೂರು ಆಗಿದ್ದು, ಇನ್ನೊಂದು ಪ್ರಕರಣದ ಆದೇಶವನ್ನು ಕೋರ್ಟ್ ಕಾಯ್ದಿರಿಸಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕಣದಲ್ಲಿ ಸೂರಜ್ಗೆ ಷರತ್ತು ಬದ್ಧ ಜಾಮೀನನ್ನು ನ್ಯಾಯಾಲಯ ನೀಡಿದೆ.
ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನವಾಗಿರುವ ಸೂರಜ್ ರೇವಣ್ಣಗೆ ಜುಲೈ 3ರಂದು ಕೋರ್ಟ್ ನ್ಯಾಯಾಂಗ ಬಂಧನ ವಿಧಿಸಿತ್ತು. ಸಿಐಡಿ ಕಸ್ಟಡಿ ಮುಕ್ತಾಯಗೊಂಡ ನಂತರ 42ನೇ ಎಸಿಎಂಎಂ ಕೋರ್ಟ್ಗೆ ಹಾಜರುಪಡಿಸಿದಾಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ಸೂಚಿಸಲಾಗಿತ್ತು. ಇದರಿಂದ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದರು. ಇದೀಗ ಜಾಮೀನು ಮಂಜೂರು ಆಗಿದ್ದರೂ ಸೂರಜ್ಗೆ ಬಿಡುಗಡೆ ಭಾಗ್ಯವಿಲ್ಲ. ಮತ್ತೊಂದು ಪ್ರಕರಣದಲ್ಲಿ ತೀರ್ಪು ಕಾಯ್ದಿರಿಸಿದ ಹಿನ್ನೆಲೆಯಲ್ಲಿ ಸದ್ಯಕ್ಕೆ ಜೈಲೇ ಗತಿಯಾಗಿದೆ.
ಜೂನ್ 23 ರಂದು ಬಂಧನವಾಗಿದ್ದ ಸೂರಜ್ ರೇವಣ್ಣ ಪರಪ್ಪನ ಅಗ್ರಹಾರ ಸೇರಿದ್ದರು. ಪ್ರಕರಣ ನಡೆದು 29 ದಿನಗಳ ನಂತರ ಈಗ ಸೂರಜ್ಗೆ ಜಾಮೀನು ಸಿಕ್ಕಿದೆ. ಸೂರಜ್ ವಿರುದ್ಧ ಇಬ್ಬರು ದೂರು ಸಲ್ಲಿಸಿದ್ದರು. ಇದರಲ್ಲಿ ಒಂದು ಕೇಸ್ನಲ್ಲಿ ಮಾತ್ರ ಜಾಮೀನು ಮಂಜೂರಾಗಿದೆ.