ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಮಹೇಶ ಕೋಣಿ ಅವರು ಜನಜೀವಾಳ ಪ್ರಕಟಿಸಿರುವ ವರದಿ ಗಮನಿಸಿದ್ದೇನೆ. ಈ ಹಿನ್ನೆಲೆಯಲ್ಲಿ ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ನಡೆದಿರುವ ನಕಲಿ ವೈದ್ಯರ ಹಾವಳಿ ಹಾಗೂ ನಕಲಿ ಕ್ಲಿನಿಕ್ ಬಗ್ಗೆ ಆರೋಗ್ಯ ಇಲಾಖೆ ಕಾರ್ಯಪ್ರವೃತ್ತವಾಗಿದೆ. ಮುಲಾಜಿಲ್ಲದೆ ನಕಲಿ ವೈದ್ಯರ ಕ್ಲಿನಿಕ್ ಗಳನ್ನು ಬಂದ್ ಮಾಡಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈ ಬಗ್ಗೆ ಅವ್ಯವಹಾರ ಹಾಗೂ ಭ್ರಷ್ಟಾಚಾರ ನಡೆಸಿರುವುದು ಕಂಡು ಬಂದರೆ ತಾಲೂಕು ಆರೋಗ್ಯ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಬೆಳಗಾವಿ :
ದಕ್ಷಿಣ ಭಾರತದ ಸುಪ್ರಸಿದ್ಧ ಸವದತ್ತಿ ಯಲ್ಲಮ್ಮ ದೇವಿ ಕ್ಷೇತ್ರದಲ್ಲಿ ನಡೆಯುವ ಬನದ ಹುಣ್ಣಿಮೆ, ಭಾರತ ಹುಣ್ಣಿಮೆ ಪ್ರಯುಕ್ತ ಲಕ್ಷಾಂತರ ಜನ ಸೇರುತ್ತಾರೆ. ಇದೇ ಸಂದರ್ಭದಲ್ಲಿ ನಕಲಿ ವೈದ್ಯರು ಹಾವಳಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಜನಜೀವಾಳ ಸರ್ಚ್ ಲೈಟ್ ಮೂಲಕ ಜಿಲ್ಲಾಡಳಿತ ಗಮನ ಸೆಳೆದಿದ್ದು ತಕ್ಷಣ ಕಾರ್ಯ ಪ್ರವೃತ್ತರಾದ ಸವದತ್ತಿ ಆರೋಗ್ಯ ಇಲಾಖೆ ಕಾರ್ಯಾಚರಣೆ ಆರಂಭಿಸಿದೆ. ಆದರೆ ಪೂರ್ಣ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆದಿಲ್ಲ. ಕೇವಲ ಹೆಸರಿಗೆ ಮಾತ್ರ ಎಂಬಂತೆ ಕಾರ್ಯಚರಣೆ ನಡೆದಿರುವುದು ಕಂಡುಬಂದಿದೆ. ಈ ಬಗ್ಗೆ ಸ್ವತಃ ಜನರೇ ಜನಜೀವಾಳಕ್ಕೆ ಮಾಹಿತಿ ನೀಡಿದ್ದಾರೆ.
ಸವದತ್ತಿ ತಾಲೂಕಿನ ಯಲ್ಲಮ್ಮನ ಗುಡ್ಡದಲ್ಲಿ ಬನದ ಹುಣ್ಣುಮೆ ಪ್ರಯುಕ್ತ ಜಾತ್ರಾ ಮಹೋತ್ಸವ ನಡೆಯತ್ತಿದ್ದು, ಈ ಸಂದರ್ಭದಲ್ಲಿ ಪರವಾನಿಗೆ ಪಡೆಯದೆ ಅನಧಿಕೃತವಾಗಿ ತಾತ್ಕಾಲಿಕ ದವಾಖಾನೆಗಳನ್ನು ಪ್ರಾರಂಭಿಸಿ ಚಿಕಿತ್ಸೆ ನಿಡುತ್ತಿರುವ ನಕಲಿ ವೈದ್ಯರ ಮೇಲೆ ದಾಳಿ ಮಾಡಿದ ತಾಲೂಕು ವೈದ್ಯಾಧಿಕಾರಿ ಮಹೇಶ ಚಿತ್ತರಗಿ ಅವುಗಳನ್ನು ತೆರವುಗೊಳಿಸಿದರು.
ಇಂದು ಸಾಯಂಕಾಲ ನಕಲಿ ವೈದ್ಯರ ಹಾವಳಿ ಎಂಬ ಸುದ್ದಿ ಪ್ರಕಟವಾಗಿತ್ತು. ಅದನ್ನು ಗಮನಿಸಿದ ತಾಲೂಕು ವೈದ್ಯಾಧಿಕಾರಿ ಸ್ಥಳಕ್ಕೆ ದೌಡಾಯಿಸಿ ತೆರವು ಕಾರ್ಯಗೊಳಿಸಿದರು.
ತಾಲೂಕಾ ವೈದ್ಯಾಧಿಕಾರಿ ಮಹೇಶ ಚಿತ್ತರಗಿ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಸಿಬ್ಬಂದಿ ಅರವಿಂದ ಮಾಳಗಿ ಮತ್ತು ಸಿಬ್ಬಂದಿಗಳು ಸೇರಿದಂತೆ ಸ್ಥಳಿಯ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.