ಉತ್ತರ ಕಾಶಿ :
ಉತ್ತರಖಾಂಡ್ ನ ಉತ್ತರಕಾಶಿಯಲ್ಲಿ ಸಿಲ್ಕ್ಯಾರಾ ಸುರಂಗದೊಳಗೆ ಸಿಕ್ಕಿಬಿದ್ದ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಯಶಸ್ವಿಯಾಗಿದ್ದು, 41 ಕಾರ್ಮಿಕರು ಸುರಕ್ಷಿತವಾಗಿ ಹೊರಗೆ ಬಂದಿದ್ದಾರೆ.
ಸುರಂಗದಿಂದ ಹೊರಬಂದ ಕಾರ್ಮಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಗುತ್ತಿದೆ.
ರಕ್ಷಣಾ ಕಾರ್ಯ ಯಶಸ್ವಿಯಾದ ನಂತರ ಸ್ಥಳೀಯರು ಸಿಹಿ ಹಂಚಿ ಸಂಭ್ರಮಿಸಿದರು.