ಬೆಂಗಳೂರು/ಬೆಳಗಾವಿ :
ರಾಜ್ಯದ ಪ್ರಭಾವಿ ಗಾಣಿಗ ಸಮುದಾಯಕ್ಕೆ ಪ್ರತ್ಯೇಕ ನಿಗಮ ಘೋಷಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಮಾಜಿ ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಅವರ ನೇತೃತ್ವದಲ್ಲಿ ನಿಯೋಗ ಬುಧವಾರ ಭೇಟಿ ಮಾಡಿ ಈ ಬಗ್ಗೆ ಒತ್ತಾಯಿಸಿದೆ.
ಫೆಬ್ರವರಿ 17 ರಂದು ರಾಜ್ಯ ಸರಕಾರ ಬಜೆಟ್ ಮಂಡಿಸಲಿದೆ. ಈ ಸಂದರ್ಭದಲ್ಲಿ ಗಾಣಿಗ ಸಮುದಾಯದ ಬೆಳವಣಿಗೆಗೆ ಪೂರಕವಾಗುವ ನಿಟ್ಟಿನಲ್ಲಿ ಪ್ರತ್ಯೇಕ ನಿಗಮ ಘೋಷಣೆ ಮಾಡುವಂತೆ ಲಕ್ಷ್ಮಣ ಸವದಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿದ್ದಾರೆ. ಗಾಣಿಗ ಸಮುದಾಯದ ಸಮಗ್ರ ಶೈಕ್ಷಣಿಕ ಹಾಗೂ ಸಾಮಾಜಿಕ ಅಭಿವೃದ್ಧಿ ಗಮನದಲ್ಲಿಟ್ಟುಕೊಂಡು ಪ್ರತ್ಯೇಕ ನಿಗಮ ಸ್ಥಾಪಿಸಬೇಕು ಎಂದು ನಿಯೋಗ ಒತ್ತಾಯಿಸಿತು.
ವಿಧಾನಸಭಾ ಚುನಾವಣಾ ಹಿನ್ನಲೆಯಲ್ಲಿ ನಿರ್ಣಾಯಕರಾಗಿರುವ ಗಾಣಿಗ ಸಮುದಾಯದ ಮತಗಳು ಬಿಜೆಪಿಗೆ ಸೆಳೆಯುವ ಪ್ರಯತ್ನವಾಗಿ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಈ ಬಾರಿ ಗಾಣಿಗ ಅಭಿವೃದ್ಧಿ ನಿಗಮವನ್ನು ಘೋಷಿಸುವ ಭರವಸೆ ಲಭಿಸಿದೆ.