ರಡ್ಡೆರಟ್ಟಿ :
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹಲ್ಯಾಳ ಗ್ರಾಮದ ಕೃಷ್ಣಾ ಸಕ್ಕರೆ ಕಾರ್ಖಾನೆಯಲ್ಲಿ ಅಗ್ನಿ ಅವಘಡ ನಡೆದಿದೆ.
ಶಾರ್ಟ್ ಸರ್ಕ್ಯೂಟ್ ನಿಂದ ಒಣ ಹಿಪ್ಪಿಗೆ ಬೆಂಕಿ ತಗುಲಿದೆ ಎನ್ನಲಾಗಿದೆ. ಈ ವೇಳೆ ಕೆಲಹೊತ್ತು ಕಾರ್ಖಾನೆಯಲ್ಲಿ ಆತಂಕ ಸೃಷ್ಟಿಯಾಗಿತ್ತು.
ತಕ್ಷಣ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಐದು ಅಗ್ನಿಶಾಮಕ ವಾಹನಗಳಿಂದ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದರು. ಸದ್ಯ ಬೆಂಕಿ ಹತೋಟಿಗೆ ಬಂದಿದೆ.
ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಸಂಭವಿಸಿದೆ.