ದೆಹಲಿ :
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ನ ಮೊದಲ
ಪ್ರಕಟಗೊಂಡಿದ್ದು, ರಾಜ್ಯದ ಕೆಲ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.
ಕಾಂಗ್ರೆಸ್ ಮುಂಬರುವ ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಕರ್ನಾಟಕದ 6, ತೆಲಂಗಾಣದ 4, ಛತ್ತೀಸ್ಗಡದ 6, ಕೇರಳದ 15, ಮೇಘಾಲಯದ 2, ನಾಗಲ್ಯಾಂಡ್, ಸಕ್ಕಿಂ ಹಾಗೂ ತ್ರಿಪುರದ ತಲಾ ಒಂದು ಕ್ಷೇತ್ರಕ್ಕೆ ಅಭ್ಯರ್ಥಿಯನ್ನ ಘೋಷಿಸಿದೆ. ಒಟ್ಟು 36 ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿಯೂ ಕೇರಳದ ವಯನಾಡಿನಿಂದ ಸ್ಪರ್ಧೆ ಮಾಡುತ್ತಿದ್ದಾರೆ. ಶಶಿ ತರೂರ್ ತಿರುವನಂತಪುರಂನಿಂದ ಟಿಕೆಟ್ ಪಡೆದಿದ್ದಾರೆ.
ಕರ್ನಾಟಕದ 6 ಕ್ಷೇತ್ರಕ್ಕೆ ಅಭ್ಯರ್ಥಿಗಳ ಹೆಸರು ಪ್ರಕಟಿಸಲಾಗಿದೆ.
ಕರ್ನಾಟಕದ 6 ಕ್ಷೇತ್ರಗಳಿಗೆ ಮಾತ್ರ ಅಭ್ಯರ್ಥಿಗಳನ್ನ ಘೋಷಿಸಲಾಗಿದೆ. ವಿಜಯಪುರ, ಶಿವಮೊಗ್ಗ, ಹಾಸನ, ತುಮಕೂರು, ಮಂಡ್ಯ ಹಾಗೂ ಬೆಂಗಳೂರು ಗ್ರಾಮಾಂತರ ಕ್ಷೇತ್ರಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆಯಾಗಿದೆ. ಶಿವಮೊಗ್ಗದಿಂದ ಗೀತಾ ಶಿವರಾಜ್ ಕುಮಾರ್, ತುಮಕೂರಿನಿಂದ ಎಸ್ಪಿ ಮುದ್ದಹನುಮೇಗೌಡ, ಮಂಡ್ಯದಿಂದ ವೆಂಕಟರಾಮೇಗೌಡ (ಸ್ಟಾರ್ ಚಂದ್ರು),ಹಾಸನಿಂದ ಶ್ರೇಯಸ್ ಪಟೇಲ್, ಬೆಂಗಳೂರು ಗ್ರಾಮಾಂತರದಿಂದ ಡಿಕೆ ಸುರೇಶ್, ಬಿಜಾಪುರದಿಂದ ಎಚ್ಆರ್ ಅಲ್ಗೂರ್ಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗದಿಂದ ಬಿಎನ್ ಚಂದ್ರಪ್ಪ, ಉಡುಪಿ-ಚಿಕ್ಕಮಗಳೂರಿನಿಂದ ಜಯಪ್ರಕಾಶ್ ಹೆಗ್ಡೆ ಹೆಸರನ್ನು ಕಾಯ್ದಿರಿಸಲಾಗಿದೆ. ಈ ಕ್ಷೇತ್ರಕ್ಕೆ ಅಭ್ಯರ್ಥಿ ಅಂತಿಮವಾಗಿಲ್ಲ.
ಉಡುಪಿ ಚಿಕ್ಕಮಗಳೂರು- ಜಯಪ್ರಕಾಶ್ ಹೆಗ್ಡೆ ಕಾಯ್ದಿರಿಸಲಾಗಿದೆ.
ತುಮಕೂರು- ಮುದ್ದಹನುಮೇಗೌಡ
ಶಿವಮೊಗ್ಗ- ಗೀತಾ ಶಿವರಾಜ್ ಕುಮಾರ್
ಹಾಸನ- ಶ್ರೇಯಸ್ ಪಟೇಲ್
ಚಿತ್ರದುರ್ಗ- ಬಿ.ಎಸ್.ಚಂದ್ರಪ್ಪ
ವಿಜಯಪುರ- ರಾಜು ಆಲಗೂರು
ಮಂಡ್ಯ- ಸ್ಟಾರ್ ಚಂದ್ರು
ಬೆಂಗಳೂರು ಗ್ರಾಮಾಂತರ- ಡಿಕೆ ಸುರೇಶ್
ಪಟ್ಟಿ ಅಂತಿಮವಾಗಿದ್ದು, ಅಧಿಕೃತವಾಗಿ ಇನ್ನಷ್ಟೇ ಬಿಡುಗಡೆಯಾಗಬೇಕಿದೆ.