ಬೆಳಗಾವಿ: ದ್ವಿಚಕ್ರ ವಾಹನ ಕಳ್ಳತನ ಪ್ರಕರಣ ಸಂಬಂಧ ಸವದತ್ತಿ ತಾಲ್ಲೂಕಿನ ಇಂಚಲದ ಆರೋಪಿ ಸಂತೋಷ ಬೇವಿನಕೊಪ್ಪನನ್ನು ಹಿರೇಬಾಗೇವಾಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹2.35 ಲಕ್ಷ ಮೌಲ್ಯದ ಐದು ದ್ವಿಚಕ್ರ ವಾಹನ ವಶಪಡಿಸಿಕೊಳ್ಳಲಾಗಿದೆ.
‘ಹಿರೇಬಾಗೇವಾಡಿಯಲ್ಲಿ ಸೋಮವಾರ ಸಂಶಯಾಸ್ಪದ ರೀತಿಯಲ್ಲಿ ಸಂಚರಿಸುತ್ತಿದ್ದ ಸಂತೋಷ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಐದು ದ್ವಿಚಕ್ರ ವಾಹನ ಕದ್ದಿದ್ದಾಗಿ ಒಪ್ಪಿಕೊಂಡಿದ್ದಾನೆ. ಬೈಲಹೊಂಗಲ ತಾಲ್ಲೂಕಿನ ನೇಸರಗಿ ವ್ಯಾಪ್ತಿಯಲ್ಲಿ ನಡೆದಿದ್ದ ಎರಡು, ಹಿರೇಬಾಗೇವಾಡಿ, ಹುಬ್ಬಳ್ಳಿ ಮತ್ತು ಬಾಗಲಕೋಟೆ ಜಿಲ್ಲೆಯ ಲೋಕಾಪುರದಲ್ಲಿ ನಡೆದಿದ್ದ ತಲಾ ಒಂದು ಪ್ರಕರಣ ಭೇದಿಸಿದಂತಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.