This is the title of the web page
This is the title of the web page

Live Stream

February 2023
T F S S M T W
 1
2345678
9101112131415
16171819202122
232425262728  

| Latest Version 8.0.1 |

State News

ರಾಮದುರ್ಗ ಅಪಘಾತ: ಮೃತರ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ Ramdurga accident: Rs 5 lakh compensation each to the family of the deceased


ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಚಿಂಚನೂರ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿರುವ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಪ್ರಕಟಿಸಿದ್ದಾರೆ.

ಬೆಳಗಾವಿ: ರಾಮದುರ್ಗ ತಾಲ್ಲೂಕಿನ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯ ಚಿಂಚನೂರ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟಿರುವ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ಪ್ರಕಟಿಸಿದ್ದಾರೆ.

ಸವದತ್ತಿ ಯಲ್ಲಮ್ಮನ ದರ್ಶನಕ್ಕೆ ಹೋಗುತ್ತಿದ್ದ ವೇಳೆ ಮಹೇಂದ್ರ ಗೂಡ್ಸ್ ವಾಹನವು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟಿರುವ ಹುಲಕುಂದ ಗ್ರಾಮದ ಆರು ಜನರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲು ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿರುತ್ತಾರೆ.

ಅಪಘಾತದಲ್ಲಿ ಗಾಯಗೊಂಡಿರುವ ಹದಿನಾರು ಜನರಿಗೆ ಅಗತ್ಯ ಚಿಕಿತ್ಸೆಯನ್ನು ನೀಡಲಾಗುವುದು. ಈ ಕುರಿತು ಈಗಾಗಲೇ ಜಿಲ್ಲಾಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿರುತ್ತದೆ.

ಉಸ್ತುವಾರಿ ಸಚಿವರ ಸಾಂತ್ವನ:

ಅಪಘಾತದಲ್ಲಿ ಮೃತಪಟ್ಟಿರುವವರ ಆತ್ಮಕ್ಕೆ ಭಗವಂತ ಚಿರಶಾಂತಿ ದಯಪಾಲಿಸಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಪ್ರಾರ್ಥಿಸಿದ್ದಾರೆ.
ಮೃತರ ಕುಟುಂಬದ ದುಃಖದಲ್ಲಿ ತಾವೂ ಭಾಗಿಯಾಗಿದ್ದೇನೆ ಎಂದು ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದ್ದಾರೆ.
ಗಾಯಾಳುಗಳು ಆದಷ್ಟು ಬೇಗನೇ ಗುಣಮುಖರಾಗಲಿ ಎಂದು ಅವರು ಹಾರೈಸಿದ್ದಾರೆ.


Jana Jeevala
the authorJana Jeevala

Leave a Reply