ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಮಾಜಿ ಕೇಂದ್ರ ಸಚಿವ ಡಾ.ಎಂ. ವೀರಪ್ಪ ಮೊಯಿಲಿ ಅವರು ನ.5 ರಂದು ಬೆಳಗಾವಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ನ.5 (ಮಂಗಳವಾರ) ರಂದು ಹುಬ್ಬಳ್ಳಿಯಿಂದ ರಸ್ತೆಯ ಮೂಲಕ ಬೆಳಗ್ಗೆ 10 ಗಂಟೆಗೆ ಬೆಳಗಾವಿಗೆ ಆಗಮಿಸಿ ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಐತಿಹಾಸಿಕ ಕಾಂಗ್ರೇಸ್ ಅಧಿವೇಶನಕ್ಕೆ ಸಾಕ್ಷಿಯಾದ ಸ್ಥಳಗಳಿಗೆ ಭೇಟಿ ನೀಡುವರು. ಸಂಜೆ 5 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಾಂಧಿ ಶತಮಾನೋತ್ಸವ ಕುರಿತು ಸಭೆಯಲ್ಲಿ ಭಾಗಿಯಾಗುವರು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.