ಅಥಣಿ:
ತಾಲೂಕು ಕೃಷಿ ಇಲಾಖೆ ವತಿಯಿಂದ ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ. ರೈತರಿಗೆ ಮುಂಗಾರು ಹಂಗಾಮಿನ ಬೀಜ ವಿತರಣೆಗೆ ಚಾಲನೆ ಕಾರ್ಯಕ್ರಮ ಜರುಗಿತು.
ರೈತರಿಗೆ ಬೀಜ ವಿತರಿಸಿ ಮಾತನಾಡಿದ ಮಾಜಿ ಉಪಮುಖ್ಯಮಂತ್ರಿಗಳು, ಅಥಣಿ ಮತಕ್ಷೇತ್ರದ ಶಾಸಕ ಲಕ್ಷ್ಮಣ ಸಂ. ಸವದಿಯವರು, ತಾಲೂಕಿನ ರೈತರಿಗೆ ಸಮರ್ಪಕ ಬೀಜ, ಗೊಬ್ಬರ ವಿತರಣೆಗೆ ಕೃಷಿ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ. ರೈತರು ಸರ್ಕಾರದ ಸೌಲಭ್ಯದ ಪ್ರಯೋಜನ ಪಡಯಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಅಥಣಿ ತಾಲೂಕು ಸಹಾಯಕ ಕೃಷಿ ನಿರ್ದೇಶಕ ನಿಂಗಣ್ಣ ಬಿರಾದಾರ, ಉಮೇಶ್ ಹಾವರೆಡ್ಡಿ ಸೇರಿದಂತೆ ಹಲವು ಅಧಿಕಾರಿಗಳು, ಕೃಷಿ ಇಲಾಖೆ ಸಿಬ್ಬಂದಿ, ವಿವಿಧ ಮುಖಂಡರು, ರೈತ ಬಾಂಧವರು ಪಾಲ್ಗೊಂಡಿದ್ದರು.