ಬೆಂಗಳೂರು : ಮಾಜಿ ಡಿಸಿಎಂ ಹಾಗೂ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಇದೀಗ ಕಾಂಗ್ರೆಸ್ ಪಕ್ಷದಲ್ಲೂ ಪ್ರಭಾವಿಯಾಗುತ್ತಿದ್ದಾರೆ. ತಾವೇ ಮಧ್ಯಸ್ಥಿಕೆ ವಹಿಸಿ ಬಿಜೆಪಿ ಸಂಸದನನ್ನೆ ಕಾಂಗ್ರೆಸ್ಸಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ.
ನಿನ್ನೆಯಷ್ಟೇ ಬಿಜೆಪಿ ಹಾಗೂ ಸಂಸತ್ ಸ್ಥಾನಕ್ಕೆ ರಾಜೀನಾಮೆ ನೀಡಿದ ಪ್ರಭಾವಿ ನಾಯಕ ಕೊನೆಗೂ ಕಾಂಗ್ರೆಸ್ ಪಾಲಾಗಿದ್ದಾರೆ.
ಬಿಜೆಪಿ ಸಂಸದ ಕರಡಿ ಸಂಗಣ್ಣ ಅವರೊಂದಿಗೆ ಲಕ್ಷ್ಮಣ ಸವದಿ ನಡೆಸಿದ ಮಾತುಕತೆ ಯಶಸ್ವಿಯಾಗಿದ್ದು ಕರಡಿ ಸಂಗಣ್ಣ ಇಂದು ಕಾಂಗ್ರೆಸ್ ಸೇರಿದ್ದಾರೆ.
ದಾಸರಹಳ್ಳಿ ಕೃಷ್ಣಮೂರ್ತಿ, ನಿವೃತ್ತ ಐಎಎಸ್ ಅಧಿಕಾರಿ ಎ. ಎಸ್.ಪುಟ್ಟಸ್ವಾಮಿ, ಪತ್ರಕರ್ತೆ ಸ್ವಾತಿ ಚಂದ್ರಶೇಖರ್ ಮತ್ತಿತರರು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬುಧವಾರ ಸೇರ್ಪಡೆಯಾದರು. ಸಚಿವ ಶಿವರಾಜ್ ತಂಗಡಗಿ ಮತ್ತಿತರರು ಉಪಸ್ಥಿತರಿದ್ದರು.