ಬೆಂಗಳೂರು :ಬೆಳಗಾವಿಯ ಮಾಜಿ ಸಂಸದ ಸದ್ಯ ಬಿಜೆಪಿಯಲ್ಲಿ ಗುರುತಿಸಿಕೊಂಡಿರುವ ಅಮರಸಿಂಹ ಪಾಟೀಲ ಮತ್ತೆ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ.ಬೆಳಗಾವಿ ಲೋಕಸಭಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ 1999 ರಲ್ಲಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಅನಂತರದ ಚುನಾವಣೆಗಳಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಅವರ ವಿರುದ್ಧ ಸೋಲು ಅನುಭವಿಸಿದ್ದರು. ಕೆಲ ಕಾಲದ ನಂತರ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರ್ಪಡೆಗೊಂಡಿದ್ದರು. ಆದರೆ ಇದೀಗ ಮರಳಿ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ.