ಬೆಂಗಳೂರು :
ನಾಗಮಂಗಲ ಒಕ್ಕಲಿಗ ಮುಖಂಡ, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ ಹಾಗೂ ಪಕ್ಷಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಶಿವರಾಮೇಗೌಡ ಬಿಜೆಪಿಗೆ ಸೇರ್ಪಡೆಯಾದರು.
ಇದೇ ವೇಳೆ ಶಿವರಾಮೇಗೌಡ ಪುತ್ರ ಚೇತನ್ ಅವರನ್ನೂ ಒಳಗೊಂಡಂತೆ ನಾಗಮಂಗಲ ಕ್ಷೇತ್ರದ ವಿವಿಧ ಪಕ್ಷಗಳ ಮುಖಂಡರು ಪಕ್ಷ ಸೇರ್ಪಡೆಯಾದರು.