ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್
ಆರೋಗ್ಯ ಹದಗೆಟ್ಟಿದ್ದು, ಚಿಕಿತ್ಸೆಗಾಗಿ ಇಂದು ಸಂಜೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
92 ವರ್ಷದ ಮನಮೋಹನ್ ಸಿಂಗ್ ಅವರನ್ನು ಸಂಜೆ ತುರ್ತು ಚಿಕಿತ್ಸಾ ಘಟಕಕ್ಕೆ ಕರೆತರಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಿಂಗ್ ಆಸ್ಪತ್ರೆಗೆ ದಾಖಲಾಗಿರುವ ಕಾರಣ ಇನ್ನಷ್ಟೇ ತಿಳಿಯಬೇಕಿದೆ.
2004ರಿಂದ 2014ರವರೆಗೆ ಯುಪಿಎ-1 ಮತ್ತು ಯುಪಿಎ-2 ಅವಧಿಯಲ್ಲಿ ಪ್ರಧಾನಿಯಾಗಿದ್ದರು.