ಮುಂಬಯಿ : ಲೋಕಸಭೆಯ ಮಾಜಿ ಸ್ಪೀಕರ್ ಮತ್ತು ಮಾಜಿ ಮಹಾರಾಷ್ಟ್ರ ಮುಖ್ಯಮಂತ್ರಿ ಮನೋಹರ ಜೋಶಿ ಗುರುವಾರ ನಿಧನರಾದರು.
ಹೃದಯಾಘಾತದಿಂದ ಬಳಲುತ್ತಿದ್ದ ಅವರು ಮುಂಬೈನ ಪಿಡಿ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು.
ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿದ್ದರು. ಲೋಕಸಭೆಯ ಮಾಜಿ ಸ್ಪೀಕರ್ ಜೋಶಿ (86) ಅವರನ್ನು ಬುಧವಾರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ಅಸ್ವಸ್ಥರಾಗಿದ್ದರು. 86 ವರ್ಷದ ಈ ಶಿವಸೇನೆ ಧುರೀಣ ಕಳೆದ ವರ್ಷ ಮೇ ತಿಂಗಳಲ್ಲಿ ಮೆದುಳಿನ ರಕ್ತಸ್ರಾವದ ನಂತರ ಅದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮನೋಹರ್ ಜೋಶಿ ಯಾರು?
ಮನೋಹರ ಜೋಶಿ ಅವರು 1995 ರಿಂದ 1999 ರವರೆಗೆ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದಾರೆ. ಅವಿಭಜಿತ ಶಿವಸೇನೆಯಿಂದ ರಾಜ್ಯದಲ್ಲಿ ಉನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ನಾಯಕರಾಗಿದ್ದರು. ಅವರು ಸಂಸತ್ ಸದಸ್ಯರಾಗಿಯೂ ಚುನಾಯಿತರಾಗಿದ್ದರು ಮತ್ತು ವಾಜಪೇಯಿ ಸರ್ಕಾರ ಅಧಿಕಾರದಲ್ಲಿದ್ದಾಗ 2002 ರಿಂದ 2004 ರವರೆಗೆ ಲೋಕಸಭಾ ಸ್ಪೀಕರ್ ಆಗಿದ್ದರು.