ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿರುವ ಮುಡಾ ಆರೋಪ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ಪರಿಣಾಮ ಬೀರಿದೆ ಎಂದು ಮಾಜಿ ಸ್ಪೀಕರ್ ಕೆ.ಬಿ. ಕೋಳಿವಾಡ ಹೇಳಿದ್ದಾರೆ. ಚುನಾವಣಾ ಪ್ರಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮುಡಾ ಹಗರಣದ ಬಗ್ಗೆ ಪದೇ ಪದೇ ಮಾತನಾಡಿದ್ದು ಸಾಕಷ್ಟು ಪರಿಣಾಮ ಬೀರಿದೆ ಎಂದು ಅವರು ಹೇಳಿದರು. ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಬೇಕೆಂಬ ನನ್ನ ಹೇಳಿಕೆಗೆ ಈಗಲು ಬದ್ಧನಿದ್ದೇನೆ. ಮುಖ್ಯಮಂತ್ರಿಗಳು ರಾಜೀನಾಮೆ ಕೊಡಲಿ ಎಂಬ ನನ್ನ ಹೇಳಿಕೆ ಅಳಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಹಿತ ದೃಷ್ಟಿಯಿಂದ ನಾನು ಆ ಮಾತನ್ನು ಹೇಳಿದ್ದೇನೆ. ಪಕ್ಷಕ್ಕೆ ಧಕ್ಕೆಯಾದರೆ ನೋಟಿಸ್ ಕೊಡುತ್ತಾರೆ. ನಾನು ಸಕ್ರಿಯ ರಾಜಕಾರಣದಲ್ಲಿ ಇಲ್ಲ. ಆದರೆ ಪಕ್ಷ ಉಳಿಸುವ ಕೆಲಸ ಮಾಡುತ್ತೇನೆ ಎಂದರು. ಎಐಸಿಸಿ ನಾಯಕರು ನನಗೆ ಯಾಕೆ ಎಚ್ಚರಿಕೆ ಕೊಡುತ್ತಾರೆ. ನಾನು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ. ನಾನು ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ನೇಹಿತರು. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ ಎಂದು ಅವರು ಹೇಳಿದರು.
ಸಿದ್ದರಾಮಯ್ಯ ಮೇಲೆ ಮುಡಾ ಹಗರಣ ಆರೋಪ ಹರಿಯಾಣ ಚುನಾವಣೆ ಮೇಲು ಪರಿಣಾಮ ಬೀರಿದೆ ಎಂದ ಮಾಜಿ ಸ್ಪೀಕರ್
