ಕೋಲ್ಕತ್ತ: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಸೌರವ್ ಗಂಗೂಲಿ ಅವರ ಕಾರು ಅಪಘಾತಕ್ಕೀಡಾಗಿದೆ. ಪಶ್ಚಿಮ ಬಂಗಾಳದ ದುರ್ಗಾಪುರ ಎಕ್ಸ್ಪ್ರೆಸ್ವೇನಲ್ಲಿ ಗುರುವಾರ ಈ ಘಟನೆ ನಡೆದಿದೆ.
ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗುತ್ತಿದ್ದಾಗ ವೇಗವಾಗಿ ಬಂದ ಲಾರಿ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಬಗ್ಗೆ ‘ಎನ್ಡಿಟಿವಿ’ ವರದಿ ಮಾಡಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಆದರೆ ಗಂಗೂಲಿ ಅವರ ಬೆಂಗಾವಲು ವಾಹನಗಳಿಗೆ ಹಾನಿಯಾಗಿದೆ.
ಲಾರಿ ಡಿಕ್ಕಿಯಾಗುತ್ತಿದ್ದಂತೆಯೇ ಗಂಗೂಲಿ ಅವರ ಕಾರಿನ ಚಾಲಕ ತಕ್ಷಣ ಬ್ರೇಕ್ ಹಾಕಿದರು. ಆಗ ಹಿಂದೆಯಿದ್ದ ಬೆಂಗಾವಲು ಪಡೆಯ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದವು ಎಂದು ವರದಿಯಾಗಿದೆ.