ಹುಬ್ಬಳ್ಳಿ :
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.
ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ವಾರ್ಷಿಕ ಪರೀಕ್ಷೆಗಳು ಮಾರ್ಚ್ 31ರಿಂದ ಏಪ್ರಿಲ್ 15ರ ವರೆಗೆ ನಡೆಯಲಿದೆ. ಹಲವಾರು ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಬದಲಾಗಿ ಬೇರೆ ವಿದ್ಯಾಕೆಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ನಿಯೋಜನೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯ ಕೋರಿಕೆಯ ಮೇರೆಗೆ ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಈ ವ್ಯವಸ್ಥೆ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ.
ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ನಿರ್ವಾಹಕರಿಗೆ ಎಸ.ಎಸ್.ಎಲ್.ಸಿ. ಪರೀಕ್ಷೆಯ ಪ್ರವೇಶ ಪತ್ರವನ್ನು ತೋರಿಸಿ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ಹೋಗಲು ಹಾಗೂ ಪರೀಕ್ಷಾ ಕೇಂದ್ರದಿಂದ ವಾಸ ಸ್ಥಳಕ್ಕೆ ಹಿಂದಿರುಗಲು ಸಂಸ್ಥೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದು. ನಗರ ಸಾರಿಗೆ, ಉಪನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಈ ಸೌಲಭ್ಯವಿರುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.