ಬೆಳಗಾವಿ: ಬೆಳಗಾವಿ ನಗರ ಮತ್ತು ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಶನಿವಾರ ಗಣಪತಿ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ನೀರಿನಲ್ಲಿ ಮುಳುಗಿ ಇಬ್ಬರು ಮೃತಪಟ್ಟ ಘಟನೆ ನಡೆದಿದೆ. ಬೆಳಗಾವಿಯ ಜಕ್ಕೇರಿ ಹೊಂಡಾದಲ್ಲಿ ವಡ್ಡರವಾಡಿ ನಿವಾಸಿ ರಾಹುಲ್ ಬ್ಯಾಕವಾಡಕರ(33) ಅವರು ಗಣಪತಿ ಮೂರ್ತಿಯೊಂದಿಗೆ ನೀರಿಗೆ ಬಿದ್ದಿದ್ದಾರೆ. ತಕ್ಷಣ ಅವರನ್ನು ಜೊತೆಯಲ್ಲಿದ್ದವರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.
ಖಾನಾಪುರ ತಾಲೂಕು ನಂದಗಡ ಗ್ರಾಮದಲ್ಲೂ ಗಣಪತಿ ವಿಸರ್ಜನೆ ಸಂದರ್ಭದಲ್ಲಿ ವ್ಯಕ್ತಿ ಒಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.