ಬೆಳಗಾವಿ: ಕೆಎಲ್ಎಸ್ ರಾಜಾ ಲಖಮಗೌಡ ಕಾನೂನು ಕಾಲೇಜಿನಲ್ಲಿ ಬುಧವಾರ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಮತ್ತು ಮಾಜಿ ಪ್ರಧಾನಿ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು.
ಪ್ರಾಚಾರ್ಯ ಡಾ.ಎ.ಎಚ್. ಹವಾಲ್ದಾರ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ವ್ಯಕ್ತಿತ್ವಗಳ ಬಗ್ಗೆ ತಿಳಿಸಿ, ವಿದ್ಯಾರ್ಥಿಗಳು ಇವರ ವಿಚಾರಗಳನ್ನು ಮೈಗೂಡಿಸಿಕೊಳ್ಳುವಂತೆ ಸಲಹೆ ನೀಡಿದರು.
ಪ್ರೊ.ಶಿಲ್ಪಾ ರಾಯ್ಕರ್ ಸ್ವಾಗತಿಸಿದರು. ಪ್ರೊ. ಕೆಂಪಣ್ಣವರ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ.ಚೇತನ್ಕುಮಾರ್ ವಂದಿಸಿದರು. ಎಲ್ಲಾ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ಕಾಲೇಜಿನ ಸಾಂಸ್ಕೃತಿಕ ವಿಭಾಗದ ವತಿಯಿಂದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
GANDHI AND LAL BAHADUR SHASHTRI JAYANTI CELEBRATED AT R.L.LAW COLLEGE
Belagavi: K.L.S Raja Lakhamgouda Law College observed Gandhi Jayanti. Principal Dr.A.H was the Chief guest for the function. Addressing the students he spoke about personalities of Mahatma Gandhi and Lal Bahadur Shashtri and advised students to imbibe them.
The function was organized by cultural department of the College, Prof Shilpa Raikar welcomed the Chief guest, Prof. Kemmpanavar spoke on the occasion. Vote of thanks was proposed by Prof.Chetankumar,all staff members and Students were present in great number on the occasion.