ಬೆಂಗಳೂರು:
ಕರ್ನಾಟಕ ವಿಧಾನಸಭೆ ಚುನಾವಣೆ 2023ರಲ್ಲಿ ಬಹುಮತ ಬಂದ ಪಡೆದ ನಂತರ ಕಾಂಗ್ರೆಸ್ ಪಕ್ಷ ಸರ್ಕಾರ ರಚಿಸಲು ಸಿದ್ಧತೆಗಳನ್ನು ನಡೆಸುತ್ತಿದೆ. ಈ ನಡುವೆ ಮುಸ್ಲಿಮರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಅದಿ ಬೇಡಿಕೆ ಮುಂದಿಟ್ಟಿದ್ದಾರೆ.
224 ಕ್ಷೇತ್ರಗಳ ಪೈಕಿ 9ರಲ್ಲಿ ಮುಸ್ಲಿಮರು ಗೆದ್ದಿದ್ದಾರೆ. ರಾಜ್ಯದಲ್ಲಿ 73 ಶಾಸಕರು ಗೆಲ್ಲಲು ಮುಸ್ಲಿಮರು ಪ್ರಮುಖ ಪಾತ್ರವಹಿಸಿದ್ದಾರೆ ಎಂದು ಹೇಳಿರುವ ಶಾಫೀ ಸಅದಿ, ನಾವು ಕಾಂಗ್ರೆಸ್ ಪಕ್ಷಕ್ಕೆ ಮತದಾನ ಮಾಡಲು ಎಲ್ಲಾ ಮಸೀದಿಗಳಲ್ಲಿ ಅಭಿಯಾನ, ಜಾಗೃತಿ ಮಾಡಿದ್ದೆವು ಎಂದು ತಿಳಿಸಿದ್ದಾರೆ.
ಎಸ್.ಎಂ. ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಸರ್ಕಾರದಲ್ಲಿ ಮುಸ್ಲಿಂ ಸಮುದಾಯದಿಂದ ಆಯ್ಕೆಯಾದ ಐವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಹಾಗಾಗಿ ಈ ಬಾರಿಯ ಸರ್ಕಾರದಲ್ಲೂ ಐವರಿಗೆ ಸಚಿವ ಸ್ಥಾನ ಮತ್ತು ಒಬ್ಬರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡಬೇಕುಎಂದು ಒತ್ತಾಯಿಸಿದರು.
ನಮಗೆ 30 ಸ್ಥಾನಗಳನ್ನು ನೀಡಬೇಕು ಎಂದು ನಾವು ಚುನಾವಣೆಗೆ ಮೊದಲೇ ಹೇಳಿದ್ದೆವು … ನಮಗೆ 15 ಸಿಕ್ಕಿತು ಮತ್ತು ಒಂಬತ್ತು ಮುಸ್ಲಿಂ ಅಭ್ಯರ್ಥಿಗಳು ಗೆದ್ದಿದ್ದಾರೆ. ಸುಮಾರು 72 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದು ಮುಸಲ್ಮಾನರಿಂದಲೇ. ಒಂದು ಸಮುದಾಯವಾಗಿ ನಾವು ಕಾಂಗ್ರೆಸ್ಗೆ ಸಾಕಷ್ಟು ಕೊಟ್ಟಿದ್ದೇವೆ. ಈಗ ನಾವು ಪ್ರತಿಯಾಗಿ ಏನನ್ನಾದರೂ ಪಡೆಯುವ ಸಮಯ. ನಮಗೆ ಒಬ್ಬ ಮುಸ್ಲಿಂ ಉಪಮುಖ್ಯಮಂತ್ರಿ ಮತ್ತು ಐವರಿಗೆ ಸಚಿವ ಸ್ಥಾನ ನೀಡಬೇಕು. ಮತ ನೀಡಿದ್ದಕ್ಕೆ ಧನ್ಯವಾದ ಹೇಳುವುದು ಕಾಂಗ್ರೆಸ್ನ ಜವಾಬ್ದಾರಿ. ಇವೆಲ್ಲವೂ ಕಾರ್ಯರೂಪಕ್ಕೆ ಬರುವುದನ್ನು ಖಚಿತಪಡಿಸಿಕೊಳ್ಳಲು ನಾವು ಸುನ್ನಿ ಉಲ್ಮಾ ಮಂಡಳಿಯ ಕಚೇರಿಯಲ್ಲಿ ತುರ್ತು ಸಭೆ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.
ಇಂದಿನ ಪ್ರಮುಖ ಸುದ್ದಿ :- ಮೈಸೂರು ರಂಗಾಯಣ ನಿರ್ದೇಶಕ ಸ್ಥಾನಕ್ಕೆ ಅಡ್ಡಂಡ ಕಾರ್ಯಪ್ಪ ರಾಜೀನಾಮೆ
ಒಂಬತ್ತು ಮುಸ್ಲಿಂ ಶಾಸಕರಿದ್ದಾರೆ ಅದರಲ್ಲಿ ಯಾರು ಸೂಕ್ತ ಎಂದು ನೋಡಿಕೊಂಡು ಕಾಂಗ್ರೆಸ್ ಪಕ್ಷವು ಒಬ್ಬರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಲಿ. ಒಂಬತ್ತು ಜನರಲ್ಲಿ ಯಾರಿಗಾದರೂ ಕೊಡಲಿ ಎಂದು ಆಗ್ರಹ ಮಾಡುತ್ತೇವೆ. ಹಳೆ ಮೈಸೂರು ಭಾಗದಲ್ಲಿ ಎಲ್ಲಾ ಮುಸ್ಲಿಂ ಮುಖಂಡರು ಜೆಡಿಎಸ್ ಪಕ್ಷಕ್ಕೆ ಹೋಗಿದ್ದರು. ಆದರೂ ಶೇ 88 ರಷ್ಟು ಮುಸ್ಲಿಮರು ಕಾಂಗ್ರೆಸ್ ಪಕ್ಷಕ್ಕೆ ವೋಟ್ ಹಾಕಿದ್ದಾರೆ. ಹಿಜಾಬ್ ಮತ್ತು ಸಾಕಷ್ಟು ವಿಚಾರದಲ್ಲಿ ಮುಸ್ಲಿಮರು ಭಯಬೀತರಾಗಿದ್ದರು. ಆ ಹಿನ್ನೆಲೆಯಲ್ಲಿ ಎಲ್ಲಾ ಮುಸ್ಲಿಮರು ಕಾಂಗ್ರೆಸ್ ಪಾರ್ಟಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದರು.
ಉಪಮುಖ್ಯಮಂತ್ರಿ ಮಾತ್ರ ಕೇಳುತ್ತಿದ್ದೇವೆ. ಮುಸ್ಲಿಂ ಮುಖ್ಯಮಂತ್ರಿ ಆಗಬೇಕಿತ್ತು. ಏಕೆಂದರೆ ಕರ್ನಾಟಕವು ತನ್ನ ಇತಿಹಾಸದಲ್ಲಿ ಎಂದಿಗೂ ಆಗಲಿಲ್ಲ, ಮತ್ತು ರಾಜ್ಯದಲ್ಲಿ 90 ಲಕ್ಷ ಜನರು ಮುಸ್ಲಿಮರಿದ್ದಾರೆ. ನಮಗೆ ನಾವು ಬಯಸಿದ 30+ ಸೀಟುಗಳು ಸಿಗಲಿಲ್ಲ. ಆದರೆ ಈಗ ಉಪಮುಖ್ಯಮಂತ್ರಿ ಹುದ್ದೆ ಬಯಸುತ್ತೇವೆ ಎಂದು ಅವರು ಹೇಳಿದರು.