ಬೆಳಗಾವಿ :
ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಜೂನ್ 16 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ಗಂಟೆಯವರೆಗೆ, ಪಿಯುಸಿ, ಐಟಿಐ (ಪಿಟ್ಟರ್, ವೆಲ್ಡರ್, ಮಷಿನಿಷ್ಟ್, ಎಲೆಕ್ಟ್ರಿಷಿಯನ್) ಹಾಗೂ ಡಿಪ್ಲೋಮಾ ಮತ್ತು ಯಾವದೇ ಪದವಿ ಮತ್ತು ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗಾಗಿ ಖಾಸಗಿ ಕಂಪನಿಗಳಿಂದ ಮಿನಿ ಉದ್ಯೋಗ ಮೇಳವನ್ನು ಕಲ್ಮೇಶ್ವರ ಮಂಗಲ ಕಾರ್ಯಾಲಯ ಗ್ರಾಮ ಪಂಚಾಯತಿ ಹತ್ತಿರ, ಹಲಗಾ ಬೆಳಗಾವಿ, ಇಲ್ಲಿ ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೋಂದಾಯಿಸಿಕೊಳ್ಳಲು ಮೊಬೈಲ್ ಸಂಖ್ಯೆ: ೮೧೪೭೬೮೫೪೭೯/೯೮೮೦೧೪೯೫೧೩ ಗೆ ಸಂಪರ್ಕಿಸಬಹುದು.
ಮಿನಿ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ೫ ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ ಉಚಿತವಾಗಿದೆ. ಇನ್ನುಳಿದ ಯಾವುದೇ ಸೌಲಭ್ಯಗಳು ಇರುವುದಿಲ್ಲ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.