ಬೆಂಗಳೂರು : ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಡಿಸೆಂಬರ್ 7ರಂದು ನಡೆಯಲಿದೆ. ಈ ಸಂಬಂಧ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಸೂಚನೆ ಹೊರಡಿಸಿದ್ದು, ಡಿಸೆಂಬರ್ 7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದೆ.
ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗಿದ್ದು, (ಅಧಿಸೂಚನೆ ನೋಡಲು Karnataka TET Notification ಇಲ್ಲಿ ಕ್ಲಿಕ್ ಮಾಡಬಹುದು) ಅಭ್ಯರ್ಥಿಗಳು ಅಕ್ಟೋಬರ್ 23ರಿಂದ ನವೆಂಬರ್ 9ರ ವರೆಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್ 7ಕ್ಕೆ ಟಿಇಟಿ ಪರೀಕ್ಷೆ ನಡೆಯಲಿದ್ದು, ಪತ್ರಿಕೆ-1ರ ಪರೀಕ್ಷೆಯು ಬೆಳಗ್ಗೆ 9:30ರಿಂದ 12 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ-2ರ ಪರೀಕ್ಷೆಯು ಮಧ್ಯಾಹ್ನ 2ರಿಂದ ಸಂಜೆ 4:30ರವರೆಗೆ ನಡೆಯಲಿದೆ ಎಂದು ತಿಳಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ 9 ಕೊನೆಯ ದಿನವಾಗಿದೆ. ಡಿಸೆಂಬರ್ 31ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಅಧಿಸೂಚನೆಯ ಸಂಪೂರ್ಣ ಮಾಹಿತಿಯನ್ನು ಶಾಲಾ ಶಿಕ್ಷಣ ಇಲಾಖೆಯ ಅಧಿಕೃತ ವೆಬ್ ಸೈಟ್ https://schooleducation.karnataka.gov.in ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.