ಬೆಳಗಾವಿ: ಮಿರಜ್ ಕಡೆಗೆ ಹೊರಟಿದ್ದ ಗೂಡ್ಸ್ ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಜಿಂದಾಲ್ ಫ್ಯಾಕ್ಟರಿಯ ಕಬ್ಬಿಣದ ಅದಿರು ತುಂಬಿಕೊಂಡು ಮಿರಜ್ ವರೆಗೆ ಹೊರಟಿದ್ದ ಗೂಡ್ಸ್ ರೈಲು ಬೆಳಗಾವಿ ಸನಿಹ ಹಳಿ ತಪ್ಪಿದ್ದರಿಂದ ರೈಲು ಸಂಚಾರದಲ್ಲಿ ಅಡಚಣೆ ಉಂಟಾಗಿದೆ. ಸುಮಾರು 3 ರಿಂದ 4 ಗಂಟೆವರೆಗೆ ದುರಸ್ತಿ ಕಾರ್ಯ ನಡೆಯಲಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.
ಬೆಳಗಾವಿ-ಮಿರಜ್ ಮಾರ್ಗದಲ್ಲಿ ಎಲ್ಲಾ ರೈಲುಗಳು ಸಂಚಾರ ಸ್ಥಗಿತಗೊಂಡಿದೆ. ಹಳಿಯ ದುರಸ್ತಿ ಕಾರ್ಯ ಮುಗಿದ ಬಳಿಕವೇ ರೈಲು ಆರಂಭಗೊಳ್ಳಲಿವೆ.